ADVERTISEMENT

‘ಪ್ರಜಾವಾಣಿ–75’ ವಾಕಥಾನ್‌ ಯಶಸ್ವಿ

ಪ್ರಜಾವಾಣಿ ಅಮೃತ ಮಹೋತ್ಸವದ ಪ್ರಯುಕ್ತ ತುಮಕೂರು ನಗರದಲ್ಲಿ ವಾಕಥಾನ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 20:49 IST
Last Updated 21 ಜನವರಿ 2023, 20:49 IST
ತುಮಕೂರಿನಲ್ಲಿ ಶನಿವಾರ ‘ಪ್ರಜಾವಾಣಿ’–75 ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಾಕಥಾನ್‌ನಲ್ಲಿ ಪ್ರಮುಖರು ಹೆಜ್ಜೆ ಹಾಕಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ಇತರರು ಇದ್ದಾರೆ
ತುಮಕೂರಿನಲ್ಲಿ ಶನಿವಾರ ‘ಪ್ರಜಾವಾಣಿ’–75 ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಾಕಥಾನ್‌ನಲ್ಲಿ ಪ್ರಮುಖರು ಹೆಜ್ಜೆ ಹಾಕಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ಇತರರು ಇದ್ದಾರೆ   

ತುಮಕೂರು: ‘ಪ್ರಜಾವಾಣಿ–75’ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾಕಥಾನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕೊರೆಯುವ ಚಳಿಯಲ್ಲೂ ಮುಂಜಾನೆಯೇ ನೂರಾರು ಮಂದಿ ಉತ್ಸಾಹದಿಂದಲೇ ಹೆಜ್ಜೆ ಹಾಕಿದರು. ಯುವಜನರು, ವಿದ್ಯಾರ್ಥಿ ಸಮೂಹ, ಪ್ರಾಧ್ಯಾಪಕರು, ಶಿಕ್ಷಕರ ವರ್ಗ, ವೈದ್ಯರು, ನರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ವಾಕಥಾನ್‌ನಲ್ಲಿ ಪಾಲ್ಗೊಂಡಿದ್ದರು.

ಚಳಿಯನ್ನೂ ಲೆಕ್ಕಿಸದೆ ಹೆಜ್ಜೆಗಳನಿಟ್ಟರು. ನಡಿಗೆಯ ಮೂಲಕ ಚಳಿ ದೂರ ಮಾಡಿಕೊಂಡು ಮತ್ತಷ್ಟು ಬಿರುಸಾಗಿ ಸಾಗಿದರು. ವಾಕಥಾನ್ ಆರಂಭದ ಸ್ಥಳಕ್ಕೆ ಬಾರದವರು ರಸ್ತೆ ಮಧ್ಯದಲ್ಲಿ ಬಂದು ಸೇರಿಕೊಂಡರು. ವಾಕಥಾನ್ ಕೊನೆಗೊಳ್ಳುವವರೆಗೂ ಜನರು ಬಂದು ಸೇರಿಕೊಳ್ಳುತ್ತಲೇ ಇದ್ದರು.

ADVERTISEMENT

ಬಿಜಿಎಸ್ ವೃತ್ತದಲ್ಲಿ (ಟೌನ್‌ಹಾಲ್ ವೃತ್ತ) ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ಜಂಟಿಯಾಗಿ ವಾಕಥಾನ್‌ಗೆ ಚಾಲನೆ ನೀಡಿದರು.

ನಂತರ ಅವರೂ ನಡಿಗೆ ಆರಂಭಿಸಿದರು. ಪ್ರಜಾವಾಣಿ ಪತ್ರಿಕೆಯ ಸಾಧನೆ, 75 ವರ್ಷಗಳ ಇತಿಹಾಸ, ಪತ್ರಿಕೆಯ ಜನಪರ ಕಾಳಜಿಯನ್ನು ಮೆಲುಕು ಹಾಕುತ್ತಾ, ಯುವಜನರೊಟ್ಟಿಗೆ ಚರ್ಚಿಸುತ್ತಾ ಸಾಗಿದರು.

ಬಿಜಿಎಸ್ ವೃತ್ತದಿಂದ ಬಿ.ಎಚ್.ರಸ್ತೆ, ಭದ್ರಮ್ಮ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ಸಾಗಿ ಸಿದ್ಧಗಂಗಾ ಆಸ್ಪತ್ರೆ ಆವರಣದಲ್ಲಿ ಕೊನೆಗೊಂಡಿತು. ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅವರು ಮುಕ್ತಾಯ ಸಮಾರಂಭದಲ್ಲಿ ಜತೆಯಾದರು.

ಪ್ರಜಾವಾಣಿ–75 ಅಮೃತ ಮಹೋತ್ಸವ ವಾಕಥಾನ್‌ ಅನ್ನು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋ ಧನಾ ಸಂಸ್ಥೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ವಾಕಥಾನ್‌ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.