ADVERTISEMENT

ಕಂಗನಾ ವಿರುದ್ಧ ತುಮಕೂರು ನ್ಯಾಯಾಲಯದಲ್ಲಿ ದೂರು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 16:00 IST
Last Updated 25 ಸೆಪ್ಟೆಂಬರ್ 2020, 16:00 IST
ಕಂಗನಾ ರನೌತ್
ಕಂಗನಾ ರನೌತ್   

ತುಮಕೂರು: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹೈಕೋರ್ಟ್ ವಕೀಲ ಹಾಗೂ ತುಮಕೂರು ನಿವಾಸಿ ಎಲ್‌.ರಮೇಶ್ ನಾಯಕ್ ಶುಕ್ರವಾರ ದೂರು ದಾಖಲಿಸಿದ್ದಾರೆ.

‘ಸೆ.22ರಂದು ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದೆ. ಆದರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದೇನೆ’ ಎಂದು ‘ಪ್ರಜಾವಾಣಿ’ಗೆ ರಮೇಶ್ ನಾಯಕ್ ತಿಳಿಸಿದರು.

‘ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲಯವೇ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ನ್ಯಾಯಾಧೀಶರಲ್ಲಿ ಕೋರುವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.