ADVERTISEMENT

ತುಮಕೂರು: ಪೋಕ್ಸೊ ಅಪರಾಧಿಗೆ 40 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 9 ಮೇ 2025, 15:33 IST
Last Updated 9 ಮೇ 2025, 15:33 IST
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)   

ತುಮಕೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿ ನಾಗೇಶ್‌ ಎಂಬಾತನಿಗೆ ಪೋಕ್ಸೊ ನ್ಯಾಯಾಲಯವು 40 ವರ್ಷ ಜೈಲು ಶಿಕ್ಷೆ, ₹2.50 ಲಕ್ಷ ದಂಡ ವಿಧಿಸಿದೆ.

2023ರ ಮೇ 23ರಂದು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಎಂ.ಬಿ.ನವೀನ್‌ ಕುಮಾರ್‌ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರು ಗುರುವಾರ ಪ್ರಕರಣದ ವಿಚಾರಣೆ ನಡೆಸಿದರು. ನಾಗೇಶ್‌ ವಿರುದ್ಧ ಆರೋಪ ಸಾಬೀತಾದ ಕಾರಣ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಎಸ್‌.ಆಶಾ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.