ಬಂಧನ
(ಸಾಂದರ್ಭಿಕ ಚಿತ್ರ)
ಮಧುಗಿರಿ: ಜಮೀನಿನಲ್ಲಿ ಹೂವು ಬಿಡಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಒಂದೇ ಗಂಟೆಯಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಪುರವರ ಹೋಬಳಿಯ ಹಳೇ ತಿಮ್ಮನಹಳ್ಳಿ ಗ್ರಾಮದ ಲಿಖಿತ ಎಂಬುವರು ತಮ್ಮ ಜಮೀನಿನಲ್ಲಿ ಸೋಮವಾರ ಹೂವು ಬಿಡಿಸುತ್ತಿದ್ದರು. ಸ್ಥಳಕ್ಕೆ ಬಂದ ಇಬ್ಬರು ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದರು. ತಕ್ಷಣ ಕೊಡಿಗೇನಹಳ್ಳಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಡಿವೈಎಸ್‌ಪಿ ಮಂಜುನಾಥ್, ಸಿಪಿಐ ಹನುಮಂತರಾಯಪ್ಪ, ಕೊಡಿಗೇನಹಳ್ಳಿ ಪಿಎಸ್ಐ ಶ್ರೀನಿವಾಸ್ ಪ್ರಸಾದ್ ಕಾರ್ಯಪ್ರವೃತ್ತರಾಗಿ ಗ್ರಾಮದ ಸುತ್ತ ಮುತ್ತ ಮಾಹಿತಿ ಕಲೆ ಹಾಕಿದರು. ಮಧುಗಿರಿ ಪಟ್ಟಣದ ಗೌರಿಬಿದನೂರು ರಸ್ತೆಯಲ್ಲಿರುವ ಕಸ ವಿಲೇವಾರಿ ಘಟಕದ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಚಿನ್ನದ ಸರ ಪತ್ತೆಯಾಗಿದೆ. ಇಬ್ಬರನ್ನು ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.