ADVERTISEMENT

ದಸರಾ ನಂತರ ತಾ.ಪಂ, ಜಿ.ಪಂ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತ

​ಪ್ರಜಾವಾಣಿ ವಾರ್ತೆ
Published 22 ಮೇ 2025, 21:32 IST
Last Updated 22 ಮೇ 2025, 21:32 IST
ತಿಪಟೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಭೇಟಿ ನೀಡಿ ತಾಲ್ಲೂಕು ಅಧಿಕಾರಿಗಳೊಂದಿಗೆ ಚರ್ಚಿಸಿದರು
ತಿಪಟೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಭೇಟಿ ನೀಡಿ ತಾಲ್ಲೂಕು ಅಧಿಕಾರಿಗಳೊಂದಿಗೆ ಚರ್ಚಿಸಿದರು   

ತಿಪಟೂರು: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಹಾಗೂ ಇತರೆ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಬಾಕಿ ಇದ್ದ ಒಂದು ಗ್ರಾಮ ಪಂಚಾಯಿತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರ ಪಟ್ಟಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರದಿಂದ ಮೀಸಲಾತಿ ಪಟ್ಟಿಗಾಗಿ ಕಾಯುತ್ತಿರುವುದಾಗಿ ತಿಳಿಸಿದರು.

ಮೇ 30ರೊಳಗೆ ಸರ್ಕಾರ ಮೀಸಲಾತಿ ಪಟ್ಟಿ ನೀಡುವುವಾಗಿ ತಿಳಿಸಿದ್ದು, ನಂತರ ಎರಡು, ಮೂರು ತಿಂಗಳಲ್ಲಿ ಚುನಾವಣೆಗೆ ತಯಾರಿ ನಡೆಸಲಾಗುವುದು. ದಸರಾ ನಂತರ ಅಕ್ಟೋಬರ್, ನವೆಂಬರ್‌ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.

ADVERTISEMENT

ಉಪವಿಭಾಗಾಧಿಕಾರಿ ಸಪ್ತಶ್ರೀ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ, ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ವೆಂಕಟೇಶ್, ಗ್ರೇಡ್‌–2 ತಹಶೀಲ್ದಾರ್ ಜಗನ್ನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.