ADVERTISEMENT

ಉಜ್ವಲ ಭವಿಷ್ಯಕ್ಕೆ ಪಾಲಿಟೆಕ್ನಿಕ್‌ ಅವಶ್ಯ: ಹುಲಿನಾಯ್ಕರ್‌

ನಗರದ ಶ್ರೀದೇವಿ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 15:32 IST
Last Updated 7 ಏಪ್ರಿಲ್ 2019, 15:32 IST
ಕಾರ್ಯಕ್ರಮವನ್ನು ಡಾ.ಎಂ.ಆರ್.ಹುಲಿನಾಯ್ಕರ್ ಉದ್ಘಾಟಿಸಿದರು. ಹಾಸ್ಯನಟ ಡಿಂಗ್ರಿ ನಾಗರಾಜ್, ರೇಣುಕಾ ಪ್ರಸಾದ್‌, ಮಹಾಂತೇಶ್ ಭಜಂತ್ರಿ, ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿ ಟಿ.ವಿ.ಬ್ರಹ್ಮದೇವಯ್ಯ, ಚಲನಚಿತ್ರ ನಿರ್ದೇಶಕ ಸ್ವಾಧೀನ್‌ಕುಮಾರ್, ಪ್ರೊ.ಸುಧಾ ಇದ್ದಾರೆ
ಕಾರ್ಯಕ್ರಮವನ್ನು ಡಾ.ಎಂ.ಆರ್.ಹುಲಿನಾಯ್ಕರ್ ಉದ್ಘಾಟಿಸಿದರು. ಹಾಸ್ಯನಟ ಡಿಂಗ್ರಿ ನಾಗರಾಜ್, ರೇಣುಕಾ ಪ್ರಸಾದ್‌, ಮಹಾಂತೇಶ್ ಭಜಂತ್ರಿ, ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿ ಟಿ.ವಿ.ಬ್ರಹ್ಮದೇವಯ್ಯ, ಚಲನಚಿತ್ರ ನಿರ್ದೇಶಕ ಸ್ವಾಧೀನ್‌ಕುಮಾರ್, ಪ್ರೊ.ಸುಧಾ ಇದ್ದಾರೆ   

ತುಮಕೂರು: ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪಾಲಿಟೆಕ್ನಿಕ್ ಕೋರ್ಸ್ ಅವಶ್ಯಕ ಎಂದು ಶ್ರೀದೇವಿ ಸಂಸ್ಥೆ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್‌ ತಿಳಿಸಿದರು.

ನಗರದ ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂಭ್ರಮ ವಾರ್ಷಿಕೋತ್ಸವ ಹಾಗೂ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯಕ್ರಮದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಜೊತೆಗೆ ಉತ್ತಮ ಜೀವನ ಶೈಲಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ರೇಣುಕಾ ಪ್ರಸಾದ್‌ ಮಾತನಾಡಿ, ‘ವಿದ್ಯಾರ್ಥಿಗಳೆಂದರೆ ವಿಶೇಷ ಶಕ್ತಿ ಚೈತನ್ಯವಿದ್ದಂತೆ. ಉನ್ನತ ವಿದ್ಯಾಭ್ಯಾಸದಿಂದ ಉತ್ತಮ ಜೀವನ ರೂ‍ಪಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಮಹಾಂತೇಶ್ ಭಜಂತ್ರಿ, ಹಾಸ್ಯನಟ ಡಿಂಗ್ರಿ ನಾಗರಾಜ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.