ತುಮಕೂರು: ಜಿಲ್ಲಾ ನ್ಯಾಯಾಲಯ ಆವರಣದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಹಿಂಭಾಗದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ವಕೀಲರು, ಜಿಲ್ಲಾ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದಾರೆ.
ನ್ಯಾಯಾಲಯ ಆವರಣದಲ್ಲಿರುವ ನಂದಿನಿ ಮಳಿಗೆ ವರೆಗೂ ಟೈಲ್ಸ್ ಅಳವಡಿಸಿ ಕಾಮಗಾರಿ ಮಾಡಲಾಗಿದೆ. ಕೆಲಸ ಪೂರ್ಣಗೊಂಡ ಕೆಲ ದಿನಗಳಲ್ಲೇ ಹಾಳಾಗಿದೆ. ಟೈಲ್ಸ್‌ಗಳನ್ನು ವ್ಯವಸ್ಥಿತವಾಗಿ ಅಳವಡಿಸಿಲ್ಲ. ಅಗತ್ಯ ಪ್ರಮಾಣದಲ್ಲಿ ಸಿಮೆಂಟ್ ಬಳಕೆ ಮಾಡದೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಇನ್ನು ಒಂದೆರಡು ದಿನಗಳಲ್ಲಿ ಅಳವಡಿಸಿರುವ ಟೈಲ್ಸ್ ಕಿತ್ತು ಬರಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕಾಮಗಾರಿ ಉಸ್ತುವಾರಿ ವಹಿಸಿದ್ದ ಎಂಜಿನಿಯರ್, ಗುತ್ತಿಗೆದಾರರನ್ನು ಕರೆಸಿ ಗುಣಮಟ್ಟದ ಕಾಮಗಾರಿ ಮಾಡಿಸಬೇಕು. ಅಲ್ಲಿಯವರೆಗೂ ಹಣ ಬಿಡುಗಡೆ ಮಾಡದಂತೆ ಸೂಚಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.