ADVERTISEMENT

ಜನಸಂಖ್ಯಾ ನಿಯಂತ್ರಣ ಕಾನೂನು ಅಗತ್ಯ: ವೈ.ಎ. ನಾರಾಯಣಸ್ವಾಮಿ

ಆಗ್ನೇಯ ಶಿಕ್ಷಕರ ಕ್ಷೇತ್ರದ ಸದಸ್ಯ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 3:46 IST
Last Updated 17 ಜುಲೈ 2021, 3:46 IST
ಖಾಸಗಿ ಶಾಲಾ ಶಿಕ್ಷಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ, ಚಿದಾನಂದ್ ಎಂ. ಗೌಡ. ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯ ಶಿವಕುಮಾರ್, ಮುಖಂಡ ಬೆಟ್ಟಸ್ವಾಮಿ ಇದ್ದರು
ಖಾಸಗಿ ಶಾಲಾ ಶಿಕ್ಷಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ, ಚಿದಾನಂದ್ ಎಂ. ಗೌಡ. ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯ ಶಿವಕುಮಾರ್, ಮುಖಂಡ ಬೆಟ್ಟಸ್ವಾಮಿ ಇದ್ದರು   

ಗುಬ್ಬಿ: ‘ದೇಶದ ಅಭಿವೃದ್ಧಿ ದೃಷ್ಟಿಯಿಂದ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ತರುವುದು ಸೂಕ್ತ. ಇದಕ್ಕೆ ಯಾವುದೇ ಮತೀಯ ಅಥವಾ ರಾಜಕೀಯ ಬಣ್ಣ ಹಚ್ಚಬಾರದು’ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಸದಸ್ಯ ವೈ.ಎ. ನಾರಾಯಣಸ್ವಾಮಿ
ಹೇಳಿದರು.

ಪಟ್ಟಣದ ಸ್ಟೆಲ್ಲಾ ಮೇರಿ ಶಾಲೆಯಲ್ಲಿ ಅನುದಾನ ರಹಿತ ಶಾಲಾ ಹಾಗೂ ಕಾಲೇಜು ಶಿಕ್ಷಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ 27 ಸಾವಿರ ಅನುದಾನರಹಿತ ಶಾಲೆಗಳಿದ್ದು, 3 ಲಕ್ಷ ಶಿಕ್ಷಕರು ಹಾಗೂ 80 ಲಕ್ಷ ವಿದ್ಯಾರ್ಥಿಗಳು ಖಾಸಗಿ ಅನುದಾನ ರಹಿತ ಶಾಲೆಗಳನ್ನು ಅವಲಂಬಿಸಿದ್ದಾರೆ. ಸರ್ಕಾರಿ ನೌಕರರಿಗೆ ಪ್ರಸ್ತುತ ಜಾರಿಯಲ್ಲಿರುವ ಎನ್‌ಪಿಎಸ್ ನಿವೃತ್ತಿ ವೇತನದ ಬದಲಿಗೆ ಒಪಿಎಸ್ ಪದ್ಧತಿ ಜಾರಿಗೆತರಲು ಒತ್ತಾಯಿಸಲಾಗುವುದು ಎಂದರು.

ADVERTISEMENT

ಪ್ರಸ್ತುತ ಪದವಿ ಕಾಲೇಜು ಪ್ರಾಧ್ಯಾಪಕರ ಉದ್ಯೋಗ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ವಯೋಮಿತಿ ಮೀರಿದವರಿಗೆ ಕನಿಷ್ಠ ವೇತನ ನಿಗದಿಪಡಿಸಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರಾದ ಶಿವಕುಮಾರ್, ಮುಖಂಡ ಬೆಟ್ಟಸ್ವಾಮಿ, ಸಂಸ್ಥೆಯ ಮುಖ್ಯಸ್ಥರಾದ ಮುಸ್ತಾಕ್ ಅಹಮ್ಮದ್‌, ಅಶ್ವಕ್ ಅಹಮ್ಮದ್‌, ಶಿಕ್ಷಕರಾದ ಶ್ರೀನಿವಾಸ ರೆಡ್ಡಿ, ಬಾಣಯ್ಯ, ಮಂಜು, ನಟರಾಜು, ಬಸವರಾಜು, ಪ್ರಹ್ಲಾದ್, ಜಗದೀಶ್, ಕರುಣಾಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.