ADVERTISEMENT

ತುಮಕೂರು | 19ರಿಂದ ಅಂಚೆ ಮತದಾನ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 7:10 IST
Last Updated 11 ಏಪ್ರಿಲ್ 2024, 7:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಏ. 19ರಿಂದ 21ರ ವರೆಗೆ 3 ದಿನಗಳ ಕಾಲ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯ ವರೆಗೆ ಜಿಲ್ಲಾಧಿಕಾರಿ ಕಚೇರಿಯ ತಾಲ್ಲೂಕು ತಹಶೀಲ್ದಾರ್ ನ್ಯಾಯಾಲಯ ಕೊಠಡಿಯಲ್ಲಿ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ತುಮಕೂರು ಲೋಕಸಭಾ ಕ್ಷೇತ್ರದ ಮತದಾರರಾಗಿದ್ದು, ಕ್ಷೇತ್ರದ ಹೊರಗೆ ಅಥವಾ ಜಿಲ್ಲೆಯ ಹೊರಗೆ ಕರ್ತವ್ಯ ನಿರ್ವಹಿಸುತ್ತಿರುವ, ಏ. 26ರಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಸಾಧ್ಯವಾಗದೇ ಇರುವ ಅಧಿಕಾರಿ, ಸಿಬ್ಬಂದಿ ಅನುಕೂಲಕ್ಕಾಗಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ.

ಅರ್ಹ ಮತದಾರರು ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಮತಗಟ್ಟೆಗೆ ಹಾಜರಾಗಿ ಮತ ಚಲಾಯಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.