ತಿಪಟೂರು: ನಗರದ ವಿನಾಯಕ ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಸಾಮೂಹಿಕ ಪ್ರಾರ್ಥನೆ ವೇಳೆ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
‘ಕೇಂದ್ರ ಸರ್ಕಾರ ತಿದ್ದುಪಡಿ ತರಲು ಹೊರಟಿರುವ ವಕ್ಫ್ ಕಾಯ್ದೆ ಸಮುದಾಯದ ವಿರೋಧಿಯಾಗಿದೆ. ಯಾವುದೇ ಕಾರಣಕ್ಕೂ ತಿದ್ದುಪಡಿಯನ್ನು ಒಪ್ಪುವುದಿಲ್ಲ. ತಿದ್ದುಪಡಿಗೆ ನಮ್ಮ ವಿರೋಧವಿದೆ. ಆದರೆ ಕೇಂದ್ರ ಸರ್ಕಾರ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶದಿಂದ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ. ಕಾಯ್ದೆ ವಿರುದ್ಧ ಉಗ್ರಹೋರಾಟ ಮಾಡುತ್ತೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.