
ತುಮಕೂರು: ಸಹಕಾರ ಭಾರತಿ ಸಂಸ್ಥೆ ವತಿಯಿಂದ ಜಿಲ್ಲಾ ಅಭ್ಯಾಸ ವರ್ಗ ಕಾರ್ಯಕ್ರಮ ನಗರದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಹಕಾರ ಭಾರತಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಚ್.ಕೃಷ್ಣಾರೆಡ್ಡಿ, ‘ದೇಶದ ಎಲ್ಲ ರಾಜ್ಯಗಳ 700ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸಂಘಟನೆ ಸಕ್ರಿಯವಾಗಿದೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಸಂಘಟನೆ ಬಲಪಡಿಸಲಾಗುವುದು’ ಎಂದು ಹೇಳಿದರು.
ಸಹಕಾರ ಭಾರತಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗದ ಸಂಘ ಚಾಲಕ ನಾಗೇಂದ್ರ ಪ್ರಸಾದ್, ಸಹಕಾರಿಗಳಾದ ಗಂಗಾಧರಯ್ಯ, ಸಿ.ಪಿ.ವಿಜಯ್, ಬಿ.ಆರ್.ಮಂಜುನಾಥ್, ಮಾಲತೇಶ್ ಉಪಸ್ಥಿತರಿದ್ದರು.
ವಿಚಾರ ಗೋಷ್ಠಿ: ನಂತರ ವಿವಿಧ ವಿಚಾರ ಗೋಷ್ಠಿಗಳು ನಡೆದವು. ಗುರುಕುಲ ಸೌಹಾರ್ದ ಸಹಕಾರಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು. 60ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.