ADVERTISEMENT

ಕುಮಾರಸ್ವಾಮಿ, ದೇವೇಗೌಡ ಕುರಿತ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 16:17 IST
Last Updated 27 ಜೂನ್ 2019, 16:17 IST
ಕೆ.ಬಿ.ಬೋರೇಗೌಡ
ಕೆ.ಬಿ.ಬೋರೇಗೌಡ   

ತುಮಕೂರು: ಒಕ್ಕಲಿಗ ಸಮಾಜದ ಪ್ರಮುಖ ನಾಯಕರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮಾಜದವರು ಗೌರವ ಭಾವದಿಂದ ಸ್ವೀಕರಿಸಿದ್ದೇವೆ. ಇಂತಹ ನಾಯಕರ ಬಗ್ಗೆ ವಾಲ್ಮೀಕಿ ಸಮಾಜದ ಪ್ರಸನ್ನಾನಂದಪುರಿ ಸ್ವಾಮೀಜಿ ಉದ್ದಟತನದಿಂದ ಮಾತನಾಡಿರುವುದು ಖಂಡನೀಯ ಎಂದು ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ಹೇಳಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಬಿ.ಬೋರೇಗೌಡ ಮಾತನಾಡಿ, ‘ಬೆಂಗಳೂರಿನಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಸಂಬಂಧ ವಾಲ್ಮೀಕಿ ಸಮುದಾಯದವರು ಹೋರಾಟ ಮಾಡುತ್ತಿದ್ದ ಸಮಯದಲ್ಲಿ ಸ್ವಾಮೀಜಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅವರ ಸ್ಥಾನದ ಘನತೆ ಮೀರಿ ಹೇಳಿಕೆ ನೀಡಿರುವುದು ಶೋಭೆ ತರುವಂತಹದ್ದಲ್ಲ’ ಎಂದು ಹೇಳಿದರು.

‘ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳದ ಕುರಿತ ಹೋರಾಟದ ಬಗ್ಗೆ ನಮ್ಮ ವಿರೋಧವಿಲ್ಲ. ಸಂವಿಧಾನಾತ್ಮಕವಾಗಿ ಪರಿಹಾರ ಪಡೆಯಲಿ. ಆದರೆ, ಪ್ರತಿಭಟನೆ ಸಮಯದಲ್ಲಿ ಸ್ವಾಮೀಜಿ ಅವರು ನೀಡಿದ ಹೇಳಿಕೆಗೆ ನಮ್ಮ ಖಂಡನೆ ಇದೆ. ಸ್ವಾಮೀಜಿ ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆಯಬೇಕು. ಇಲ್ಲದೇ ಇದ್ದರೆ ಹೋರಾಟ ಮಾಡಲಾಗುವುದು’ ಎಂದರು.

ADVERTISEMENT

ಭೈರವಿ ಮಹಿಳಾ ಸಂಘದ ಅಧ್ಯಕ್ಷೆ ಸುಜಾತಾ ನಂಜೇಗೌಡ, ಚುಂಚಶ್ರೀ ಭೈರವಿ ಮಹಿಳಾ ಸಂಘದ ಅಧ್ಯಕ್ಷ ಸುನಂದಾ ಎಲ್ ಗೌಡ, ಭೈರವಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಧಾ ಕುಮಾರ್, ಸಮಾಜದ ಮುಖಂಡ ಬೆಳ್ಳಿ ಲೋಕೇಶ್ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.