ADVERTISEMENT

ರಸ್ತೆ ಅಭಿವೃದ್ಧಿಗೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 4:07 IST
Last Updated 27 ಸೆಪ್ಟೆಂಬರ್ 2021, 4:07 IST
ಬಿ.ಸಿ.ನಾಗೇಶ್
ಬಿ.ಸಿ.ನಾಗೇಶ್   

ತಿಪಟೂರು: ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂರು ವರ್ಷಗಳಿಂದಲೂ ಗ್ರಾಮೀಣ ಹಾಗೂ ನಗರ ಪ್ರದೇಶದ ರಸ್ತೆಗಳ ಅಭಿವೃದ್ಧಿ ಶಾಸಕ ಬಿ.ಸಿ.ನಾಗೇಶ್ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ತಾಲ್ಲೂಕಿನ ವಿವಿಧೆಡೆಗಳಲ್ಲಿ ವಿವಿಧ ಯೋಜನೆಗಳ ಅಡಿ ಶೇ 70ಕ್ಕೂ ಹೆಚ್ಚಿನ ಸುವ್ಯವಸ್ಥಿತ ರಸ್ತೆ ನಿರ್ಮಾಣವಾಗಿವೆ.

ನಗರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆ ಇದೆ. ‌ಗ್ರಾಮೀಣ ಭಾಗದಿಂದ ನಗರಕ್ಕೆ ಕೊಬ್ಬರಿ ತೆಗೆದುಕೊಂಡು ಬರಲು ಸುವ್ಯವಸ್ಥಿತ ರಸ್ತೆಗಳು ಅಗತ್ಯವಿದ್ದು, ಶಾಸಕರು ಇದಕ್ಕೆ ಆದ್ಯತೆ ನೀಡಿದ್ದಾರೆ. ಶಾಲೆ, ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುವ ರಸ್ತೆಗಳ ನಿರ್ಮಾಣಕ್ಕೂ ಶಾಸಕರ ಅನುದಾನ ಬಳಕೆಯಾಗಿದೆ.

ADVERTISEMENT

ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಅನುದಾನವನ್ನು ಶೇ 100ರಷ್ಟು ಬಳಕೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸುಮಾರು 73 ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ 62 ಕಾಮಗಾರಿ ಪೂರ್ಣಗೊಂಡಿದ್ದು, 11 ಕಾಮಗಾರಿಗಳು ಪ್ರಗತಿಯಲ್ಲಿವೆ.

2019ರಲ್ಲಿ ಸುಮಾರು 43 ಕಾಮಗಾರಿಗಳು ಅನುಮೋದನೆಗೊಂಡಿತ್ತು. ಅದರಲ್ಲಿ 40ಕಾಮಗಾರಿಗಳು ರಸ್ತೆ ಅಭಿವೃದ್ಧಿಯದ್ದಾಗಿದ್ದು, ಉಳಿದ 3 ಕಾಮಗಾರಿ ನಗರದ ಎನ್.ಎಚ್. 206ರ ಬೀದಿ ದೀಪಗಳ ಅಭಿವೃದ್ಧಿಗಾಗಿ ಬಳಕೆ ಮಾಡಲಾಗಿದೆ. ಒಟ್ಟು 15 ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ 28 ಕಾಮಗಾರಿಗಳು ಪೂರ್ಣಗೊಂಡಿವೆ.

2020ರಲ್ಲಿ ಅನುಮೋದನೆಗೊಂಡ 27 ಕಾಮಗಾರಿಗಳಲ್ಲಿ ಎಲ್ಲವೂ ಸದ್ಯ ಪ್ರಗತಿಯಲ್ಲಿವೆ. ನಗರದಾದ್ಯಂತ ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆಗೆ ₹20 ಲಕ್ಷ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.