ADVERTISEMENT

ಐಟಿಐ ಕಾಲೇಜಿನ ಹೆಚ್ಚುವರಿ ಕಟ್ಟಡಕ್ಕೆ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 3:51 IST
Last Updated 4 ಆಗಸ್ಟ್ 2021, 3:51 IST
ಕುಣಿಗಲ್ ಸರ್ಕಾರಿ ಐಟಿಐ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಡಾ.ರಂಗನಾಥ್ ಭೂಮಿ ಪೂಜೆ ನೆರವೇರಿಸಿದರು
ಕುಣಿಗಲ್ ಸರ್ಕಾರಿ ಐಟಿಐ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಡಾ.ರಂಗನಾಥ್ ಭೂಮಿ ಪೂಜೆ ನೆರವೇರಿಸಿದರು   

ಕುಣಿಗಲ್: ಸ್ಪರ್ಧಾತ್ಮಕ ಪ್ರಪಂಚದಲ್ಲಿ ತಾಂತ್ರಿಕ ಶಿಕ್ಷಣ ಅಗತ್ಯ. ಉದ್ಯೋಗ ಸೃಷ್ಟಿಸುವ ತಾಂತ್ರಿಕ ಶಿಕ್ಷಣಕ್ಕೆ ವಿದ್ಯಾರ್ಥಿಗಳು, ಪೋಷಕರು ಆದ್ಯತೆ ನೀಡಬೇಕು ಎಂದು ಶಾಸಕ ಡಾ.ರಂಗನಾಥ್ ಹೇಳಿದರು.

ಟಾಟಾ ಸಂಸ್ಥೆಯ ಸಹಯೋಗದಲ್ಲಿ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಐಟಿಐ ಕಾಲೇಜಿನ ಹೆಚ್ಚುವರಿ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕು ಕೇಂದ್ರದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಐಟಿಐ ಕಾಲೇಜುಗಳಿಗೆ ನಿಗದಿಪಡಿಸಿರುವ ಪ್ರಮಾಣಕ್ಕಿಂತಲೂ ಹೆಚ್ಚು ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ವ್ಯವಸ್ಥೆಯನ್ನು ಸರಿದೂಗಿಸಲು ಪ್ರಯತ್ನಿಸಬೇಕಿದೆ ಎಂದರು.

ADVERTISEMENT

ಶಾಸಕರ ಅಸಮಾಧಾನ: ಸರ್ಕಾರಿ ಐಟಿಐ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಗಮನಕ್ಕೆ ತರದೆ ಮಾಡುತ್ತಿರುವ ಬಗ್ಗೆ ಶಾಸಕ ಡಾ.ರಂಗನಾಥ್ ತೀವ್ರ ಅಸಮಾದಾನ ವ್ಯಕ್ತಪಡಿಸಿದರು. ಕಾಮಗಾರಿ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ನಿರ್ಮಿತಿ ಕೇಂದ್ರದ ನಿರ್ಲಕ್ಷ್ಯವನ್ನು ಖಂಡಿಸಿದರು. ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕನಿಷ್ಠ ಮಾಹಿತಿ ನೀಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪ್ರಾಂಶುಪಾಲ ಕೆಂಪಣ್ಣ, ಪುರಸಭೆ ಉಪಾಧ್ಯಕ್ಷೆ ಮಂಜುಳಾ ರಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸೆಮ್ಮಿವುಲ್ಲಾ, ಸದಸ್ಯ ಉದಯ್, ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ರಂಗಣ್ಣಗೌಡ, ಮುಖಂಡರಾದ ಅಜಾಂ ಪಾಷಾ, ಸತೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.