ADVERTISEMENT

ಕುಣಿಗಲ್‌ | ಗರ್ಭಿಣಿಯಾದ ಬಾಲಕಿ: ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 5:42 IST
Last Updated 16 ಜುಲೈ 2025, 5:42 IST
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)   

ಕುಣಿಗಲ್‌: 9ನೇ ತರಗತಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇರೆಗೆ ಕಿರಣ್‌ (21) ಎಂಬಾತನ ವಿರುದ್ಧ ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಿರಣ್‌ ಎಂಬಾತ ಮಗಳನ್ನು ಪುಸಲಾಯಿಸಿ ಅತ್ಯಾಚಾರ ವೆಸಗಿದ್ದಾನೆ. ಈತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯ ತಾಯಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ವಾರ, ತಿಂಗಳಿಗೊಮ್ಮೆ ಊರಿಗೆ ಬಂದು ಹೋಗುತ್ತಿದ್ದರು. ಬಾಲಕಿ ತಂದೆಯ ಜತೆಗೆ ತಾಲ್ಲೂಕಿನ ಗ್ರಾಮವೊಂದರಲ್ಲಿ ವಾಸವಿದ್ದರು. ಭಾನುವಾರ ತಾಯಿ ಮನೆಗೆ ಬಂದಾಗ ಬಾಲಕಿ ಮಲಗಿದ್ದು, ವಿಚಾರಿಸಿದಾಗ ಆರೋಗ್ಯ ಸರಿಯಿಲ್ಲ ಎಂದಿದ್ದಾಳೆ. ಕೂಡಲೇ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆರೋಗ್ಯ ಪರೀಕ್ಷಿಸಿದಾಗ ಬಾಲಕಿ ಗರ್ಭ ಧರಿಸಿರುವುದು ಗೊತ್ತಾಗಿದೆ. ನಂತರ ಗರ್ಭಪಾತ ಮಾಡಿಸಿದ್ದಾರೆ.

ADVERTISEMENT

‘ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ವೈದ್ಯರಿಗೆ ತಿಳಿಸಿ ಕಾನೂನು ನಿಯಮದಂತೆ ಗರ್ಭಪಾತ ಮಾಡಿಸಲಾಗಿದೆ’ ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.