ADVERTISEMENT

ತುಮಕೂರು: ಮಣ್ಣು ಸಾಗಣೆಗೆ ತಡೆ; ಕ್ರಿಮಿನಲ್ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 15:17 IST
Last Updated 31 ಜುಲೈ 2024, 15:17 IST
ತುಮಕೂರು ತಾಲ್ಲೂಕು ಜನಪನಹಳ್ಳಿ ತಾಂಡ್ಯ ಸಮೀಪ ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದ ಪ್ರದೇಶಕ್ಕೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಸಂತೋಷ್‌ಗೌಡ ನೇತೃತ್ವದ ತಂಡ ಬುಧವಾರ ಭೇಟಿ ನೀಡಿತ್ತು
ತುಮಕೂರು ತಾಲ್ಲೂಕು ಜನಪನಹಳ್ಳಿ ತಾಂಡ್ಯ ಸಮೀಪ ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದ ಪ್ರದೇಶಕ್ಕೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಸಂತೋಷ್‌ಗೌಡ ನೇತೃತ್ವದ ತಂಡ ಬುಧವಾರ ಭೇಟಿ ನೀಡಿತ್ತು   

ತುಮಕೂರು: ತಾಲ್ಲೂಕಿನ ಜನಪನಹಳ್ಳಿ ತಾಂಡ್ಯ ಸಮೀಪ, ನರಿಕಲ್ಲು ಬೆಟ್ಟಕ್ಕೆ ಹೊಂದಿಕೊಂಡ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುವುದನ್ನು ಅಧಿಕಾರಿಗಳ ತಂಡ ಬುಧವಾರ ತಡೆದಿದೆ.

ಕಂದಾಯ ಭೂಮಿ ಹಾಗೂ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿದೆ ಎಂಬ ದೂರಿನ ಮೇರೆಗೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಸಂತೋಷ್‌ಗೌಡ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಮಣ್ಣು ಸಾಗಣೆಗೆ ತಡೆಯೊಡ್ಡಿದ್ದಾರೆ.

ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಣ್ಣು ತೆಗೆದು ಸಾಗಣೆ ಮಾಡುತ್ತಿರುವುದು ಕಂಡು ಬಂದ ತಕ್ಷಣ ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಯಿತು. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಕ್ರಮ ವಹಿಸಿದ್ದಾರೆ ಎಂದು ಹೈಕೋರ್ಟ್ ವಕೀಲ ಎಲ್.ರಮೇಶ್ ನಾಯಕ್ ತಿಳಿಸಿದರು.

ಅಕ್ರಮವಾಗಿ ಮಣ್ಣು ತೆಗೆದು ಸಾಗಣೆ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ಕೃಷಿ ಚಟುವಟಿಕೆಗಳಿಗೆ ಬಳಸಬೇಕಾದ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ. ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ಭೂ ಮಾಫಿಯಾ ಕೆಲಸ ಮಾಡುತ್ತಿದೆ. ಇದರಿಂದ ಜೀವ ವೈವಿಧ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.