ADVERTISEMENT

ಅಪೌಷ್ಟಿಕತೆ ನಿವಾರಣೆ ಅನಿವಾರ್ಯ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 1:35 IST
Last Updated 17 ಜನವರಿ 2021, 1:35 IST
ಶಿರಾದ ಬೇಗಂ ಮೋಹಲ್ಲಾದ ಪಿ.ಎಚ್.ಕಾಲೊನಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ನಡೆಯಿತು
ಶಿರಾದ ಬೇಗಂ ಮೋಹಲ್ಲಾದ ಪಿ.ಎಚ್.ಕಾಲೊನಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ನಡೆಯಿತು   

ಶಿರಾ: ಬಡಜನತೆಯ ಅಪೌಷ್ಟಿಕತೆ ನಿವಾರಣೆಗೆ ಪೋಷಣ ಅಭಿಯಾನ ಪೂರಕವಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಹೇಳಿದರು.

ನಗರದ ಬೇಗಂ ಮೋಹಾಲ್ಲಾದ ಪಿ.ಎಚ್.ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ‌ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಪೌಷ್ಟಿಕತೆ ನಿರ್ಮೂಲನೆಗಾಗಿ ಸ್ಥಳೀಯ‌ವಾಗಿ ದೊರೆಯುವ ಧಾನ್ಯ, ಸೊಪ್ಪು, ತರಕಾರಿ, ಹಣ್ಣುಗಳನ್ನು ಹೆಚ್ಚುಬಳಕೆ ಮಾಡಬೇಕು. ಸರ್ಕಾರ ಸಹ ಅಪೌಷ್ಟಿಕತೆ ನಿರ್ಮೂಲನೆಗಾಗಿ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದು ಅಂಗನವಾಡಿ ಕೇಂದ್ರಗಳು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇಲ್ಲಿ ನೀಡುವ ಪೌಷ್ಟಿಕ ಆಹಾರವನ್ನು ತಪ್ಪದೆ ಬಳಸಬೇಕು ಎಂದರು.

ADVERTISEMENT

ಅಪೌಷ್ಟಿಕತೆ ನಿರ್ಮೂಲನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ. ಇದರಿಂದಾಗಿ ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಮರಣವನ್ನು ತಡೆಯಲು ಸಾಧ್ಯ ಎಂದರು.ಜ್ಯೋತಿ, ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.