ADVERTISEMENT

ತುಮಕೂರು: ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್ ಸಂಚಾರ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 4:25 IST
Last Updated 7 ಏಪ್ರಿಲ್ 2021, 4:25 IST

ತುಮಕೂರು: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರ ಸಂಚಾರಕ್ಕೆ ತೊಂದರೆಯಾಗದಂತೆ ಜಿಲ್ಲಾ ಆಡಳಿತ ಕ್ರಮ ಕೈಗೊಂಡಿದೆ.

ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ ಮಾಲೀಕರ ಸಭೆಯನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನಡೆಸಿದರು. ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ ಹಾಗೂ ಇನ್ನಿತರ ವಾಹನಗಳಲ್ಲಿ ಪ್ರಯಾಣಿಕರ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ 610 ಬಸ್‍ಗಳು ಪ್ರತಿನಿತ್ಯ ಸಂಚರಿಸುತ್ತಿವೆ. 485 ಪರವಾನಗಿ ಇರುವ ಖಾಸಗಿ ಬಸ್‍ಗಳು ಸಂಚಾರ ನಡೆಸುತ್ತಿವೆ. ಜಿಲ್ಲೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗುವುದಿಲ್ಲ. ಬೆಂಗಳೂರು ಹಾಗೂ ಹೊರ ಜಿಲ್ಲೆಗಳಿಗೆ ತೆರಳುವವರಿಗೆ ಸಮಸ್ಯೆ ಆಗಬಹುದು ಎಂದರು.

ADVERTISEMENT

ಹೊರ ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ85 ಖಾಸಗಿ ಬಸ್‌ಗಳು ಸಂಚರಿಸಲಿವೆ. ಅದಕ್ಕಾಗಿ ಸಾರಿಗೆ ಅಧಿಕಾರಿಗಳು ವಿಶೇಷ ಪರವಾನಗಿ ನೀಡಿದ್ದಾರೆ. ಈಗಾಗಲೇ ನಿಗದಿಪಡಿಸಿದ ದರ ಪಡೆದುಕೊಳ್ಳಬೇಕು. ಹೆಚ್ಚಿಗೆ ಹಣ ತೆಗೆದುಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ‘ಖಾಸಗಿ ಬಸ್ ಸಂಚಾರಕ್ಕೆ ಭದ್ರತೆ ಕಲ್ಪಿಸಲಾಗುವುದು’ ಎಂದರು.

ಆರ್‌ಟಿಒ ರಾಜು, ‘ಖಾಸಗಿ ಬಸ್‍, ಮ್ಯಾಕ್ಸಿಕ್ಯಾಬ್, ಶಾಲಾ ವಾಹನಗಳಿಗೆ ವಿಶೇಷ ಪರವಾನಗಿ ನೀಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ 1,500 ವಾಹನಗಳು ಸಂಚರಿಸಲಿವೆ’ ಎಂದು ಸಭೆಗೆ ತಿಳಿಸಿದರು.

ನಿಷೇಧಾಜ್ಞೆ ಜಾರಿ:ಕೆಎಸ್‌ಆರ್‌ಟಿಸಿ ಘಟಕ, ಬಸ್ ನಿಲ್ದಾಣಗಳ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೆರವಣಿಗೆ, ಪ್ರತಿಭಟನೆಗೆ ಅವಕಾಶ ಇಲ್ಲವಾಗಿದೆ. 5 ಜನಕ್ಕೂ ಮೇಲ್ಪಟ್ಟು ಗುಂಪು ಸೇರುವಂತಿಲ್ಲ.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನ
ಬಸಪ್ಪ, ಹೆಚ್ಚುವರಿ ಪೊಲೀಸ್
ವರಿಷ್ಠಾಧಿಕಾರಿ ಉದೇಶ್,
ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂ
ತ್ರಣಾಧಿಕಾರಿ ಬಸವರಾಜು, ವಿಭಾಗೀಯ ಸಂಚಾರ ಅಧಿಕಾರಿ ಫಕ್ರುದ್ದೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.