ADVERTISEMENT

ತುಮಕೂರು: ಕೋವಿಡ್ ಚಿಕಿತ್ಸೆಗೆ ನೋಡಲ್ ಅಧಿಕಾರಿ

ಕೊರೊನಾ ಸೋಂಕಿತರ ವಾಪಸ್ ಕಳುಹಿಸದಿರಿ; ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 16:20 IST
Last Updated 19 ಆಗಸ್ಟ್ 2020, 16:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿರ್ದೇಶನದ ಅನ್ವಯ ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಿ ಸೋಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಬಾರದು’ ಎಂದರು.

ಜಿಲ್ಲಾ ಆರೋಗ್ಯ ಇಲಾಖೆ ಶಿಫಾರಸು ಮಾಡುವ ಸೋಂಕಿತರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಪಾವತಿಸಲಾಗುವುದು. ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳು ಕೂಡ ಹಾಸಿಗೆಗಳು, ಐಸಿಯು, ವೆಂಟಿಲೇಟರ್‌ಗಳನ್ನು ಸಿದ್ಧವಾಗಿ ಇಟ್ಟುಕೊಂಡಿರಬೇಕು ಎಂದು ಹೇಳಿದರು.

ADVERTISEMENT

ಪ್ರತಿ ಖಾಸಗಿ ಆಸ್ಪತ್ರೆಗಳು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಅದೇ ರೀತಿ ಜಿಲ್ಲಾಡಳಿತದಿಂದ ಪ್ರತಿ ಆಸ್ಪತ್ರೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇದರಿಂದ ಸಮನ್ವಯ ಸಾಧಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.