ADVERTISEMENT

ಖಾಸಗಿ ಆಸ್ಪತ್ರೆ ಬಂದ್ ಮಾಡಿದರೆ ಕ್ರಮ: ಸಚಿವ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 16:50 IST
Last Updated 30 ಮಾರ್ಚ್ 2020, 16:50 IST
ಮಧುಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಶಾಸಕ ಎಂ.ವಿ.ವೀರಭದ್ರಯ್ಯ ಸಭೆ ನಡೆಸಿದರು.
ಮಧುಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಶಾಸಕ ಎಂ.ವಿ.ವೀರಭದ್ರಯ್ಯ ಸಭೆ ನಡೆಸಿದರು.   

ಮಧುಗಿರಿ: ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡುವಂತಿಲ್ಲ, ಎಂದಿನಂತೆ ಬಾಗಿಲು ತೆರೆದು ವೈದ್ಯಕೀಯ ಸೇವೆ ಕಲ್ಪಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು.

ಸೀಮಾಂಧ್ರ ಪ್ರದೇಶಕ್ಕೆ ತೆರಳುವ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಅಗತ್ಯ ವಸ್ತುಗಳ ವಾಹನಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ತಿಳಿಸಿ, ಚೆಕ್‌ಪೋಸ್ಟ್‌ಗಳಲ್ಲಿ ಒಬ್ಬರು ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಹೋಮ್ ಗಾರ್ಡ್ ಕಾರ್ಯ ನಿರ್ವಹಿಸಲಿ ಎಂದರು.

ADVERTISEMENT

ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ, ಉಪವಿಭಾಗಾಧಿಕಾರಿ ಡಾ.ನಂದಿನಿ ದೇವಿ, ಡಿವೈಎಸ್‌ಪಿ ಎಂ.ಪ್ರವೀಣ್, ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಇಒ ಡಿ.ದೊಡ್ಡಸಿದ್ದಯ್ಯ, ಸಮಾಜ ಕಲ್ಯಾಣಾಧಿಕಾರಿ ಹರೀಶ್, ಅಮರ ನಾರಾಯಣ, ಸಿಡಿಪಿಒ ಅನಿತಾ, ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು, ಸರ್ದಾರ್, ಪಿಎಸ್‍ಐ ಎಲ್.ಕಾಂತರಾಜು, ಸೌಮ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.