ADVERTISEMENT

ಮೀಸಲಾತಿ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2018, 14:18 IST
Last Updated 8 ಆಗಸ್ಟ್ 2018, 14:18 IST
ಶಿರಾದ ವಾರ್ಡು ನಂ 4 ರ ಸ್ಥಳೀಯ ಸಂಸ್ಥೆ ಚುನಾವಣೆಯ ಮೀಸಲಾತಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿ ಬುಧವಾರ ಸ್ಥಳೀಯ ನಾಗರೀಕರು ತಹಶೀಲ್ದಾರ್ ಆರ್.ಗಂಗೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಶಿರಾದ ವಾರ್ಡು ನಂ 4 ರ ಸ್ಥಳೀಯ ಸಂಸ್ಥೆ ಚುನಾವಣೆಯ ಮೀಸಲಾತಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿ ಬುಧವಾರ ಸ್ಥಳೀಯ ನಾಗರೀಕರು ತಹಶೀಲ್ದಾರ್ ಆರ್.ಗಂಗೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.   

ಶಿರಾ: ನಗರಸಭೆ ವಾರ್ಡ್ ನಂ. 4ರಲ್ಲಿ ನಿಗಧಿಪಡಿಸಿರುವ ಮೀಸಲಾತಿ ವರ್ಗೀಕರಣವನ್ನು ವಿರೋಧಿಸಿ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಆರ್.ಗಂಗೇಶ್ ಅವರಿಗೆ ಮನವಿ ಸಲ್ಲಿಸಿದರು.

‘ವಾರ್ಡ್ ನಂ. 4ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸತತವಾಗಿ 3 ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದ್ದು, ಇದರಿಂದ ವಾರ್ಡ್‌ನಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಪರಿಶಿಷ್ಟ ಜಾತಿಯವರಿಗೆ ಅನ್ಯಾಯವಾಗುತ್ತಿದೆ. ವಿಧಾನಸಭೆ ಚುನಾವಣೆಗೆ ಮೊದಲು ಪ್ರಕಟಿಸಿದ್ದ ಮೀಸಲಾತಿ ಪಟ್ಟಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಕ್ಷೇತ್ರವನ್ನು ಪ್ರಭಾವಿಗಳು ತಮ್ಮ ರಾಜಕೀಯ ಪ್ರಭಾವ ಬಳಸಿ ಹಿಂದುಳಿದ ವರ್ಗಕ್ಕೆ ಬದಲಾವಣೆ ಮಾಡಿಸಿದ್ದು, ಸಾಮಾಜಿಕ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದೆ’ ಎಂದು ಪ್ರತಿಭಟನಾಕಾರರು ದೂರಿದರು.

ವಾರ್ಡ್‌ನಲ್ಲಿ 1800 ಮತದಾರರು ಇದ್ದು, ಇದರಲ್ಲಿ ಮಾದಿಗ 200, ಕೊರಮ 150, ಬೋವಿ 120, ಲಂಬಾಣಿ 100, ಶಿಳ್ಳೇಕ್ಯಾತ 150, ಛಲವಾಧಿ 80 ಹಾಗೂ ಪರಿಶಿಷ್ಟ ಪಂಗಡದವರು 150 ಮತದಾರರು ಇದ್ದಾರೆ. ಸಾಮಾಜಿಕ ನ್ಯಾಯ ಕಾಪಾಡುವ ದೃಷ್ಟಿಯಿಂದ ಮೀಸಲಾತಿಯನ್ನು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ನಗರದಲ್ಲಿರುವ ಕಾರೇಹಳ್ಳಿ ರಂಗನಾಥ ಸ್ವಾಮಿ ಸಮುದಾಯ ಭವನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ತಹಶೀಲ್ದಾರ್ ಕಚೇರಿಗೆ ತಲುಪಿ ತಹಶೀಲ್ದಾರ್ ಆರ್.ಗಂಗೇಶ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಮಲಿಂಗಪ್ಪ, ಶಂಕರ್, ರಾಜು, ರಮೇಶ್, ರಂಗನಾಥಪ್ಪ, ಶಿವಮ್ಮ, ಕಾಂತರಾಜು, ಪರಮೇಶ್, ಪುಟ್ಟಮ್ಮ, ಮಂಜುಳಾ, ನಿಂಗಣ್ಣ, ರುದ್ರಪ್ಪ, ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.