ADVERTISEMENT

ಕೊರಟಗೆರೆ ಅಭಿವೃದ್ಧಿಗಾಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಮೇ 2020, 16:36 IST
Last Updated 31 ಮೇ 2020, 16:36 IST
ಕೊರಟಗೆರೆಯಲ್ಲಿ ಸಿಐಟಿಯು ಕಾರ್ಯಕರ್ತರು ಕೊರಟಗೆರೆ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು
ಕೊರಟಗೆರೆಯಲ್ಲಿ ಸಿಐಟಿಯು ಕಾರ್ಯಕರ್ತರು ಕೊರಟಗೆರೆ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು   

ಕೊರಟಗೆರೆ: 50ನೇ ವರ್ಷಾಚರಣೆ ಅಂಗವಾಗಿ ಸಿಐಟಿಯು ಕಾರ್ಯಕರ್ತರು ಕೊರಟಗೆರೆ ಅಭಿವೃದ್ಧಿಗೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಿಐಟಿಯು ಸ್ಥಾಪನೆಯಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಕೊರಟಗೆರೆ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ ಹಕ್ಕೊತ್ತಾಯಿಸಿದರು.

ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಬೇಕು. ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ರೈತರು, ಕೃಷಿ ಕೂಲಿಕಾರರು, ಸ್ತ್ರೀಶಕ್ತಿ ಸಂಘಗಳು, ಕುಲ ಕಸುಬುದಾರರ ಎಲ್ಲ ಸಾಲಮನ್ನಾ ಮಾಡಬೇಕು. ಕಟ್ಟಡ ಕಾರ್ಮಿಕರನ್ನು ಸರ್ಕಾರ ನೋಂದಾಯಿಸಿ ₹5 ಸಾವಿರ ಸಹಾಯಧನ ಕೂಡಲೇ ಖಾತೆಗಳಿಗೆ ಹಾಕಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಜಿಲ್ಲಾ ಉಪಾಧ್ಯಕ್ಷ ಬಿ.ಉಮೇಶ್‌, ತಾಲ್ಲೂಕು ಕಾರ್ಯದರ್ಶಿ ವನಜಾಕ್ಷಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.