ADVERTISEMENT

ಗ್ರಾ.ಪಂ ಕಚೇರಿಗೆ ಬೀಗ

ನರೇಗಾ ಕಾಮಗಾರಿಯಲ್ಲಿ ಅವ್ಯವಹಾರದ ಆರೋಪ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 7:59 IST
Last Updated 16 ಸೆಪ್ಟೆಂಬರ್ 2021, 7:59 IST
ನರೇಗಾ ಕಾಮಗಾರಿ ತನಿಖೆಗೆ ಆಗ್ರಹಿಸಿ ಚಂಗಾವಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಹಾಗೂ ಜೆಡಿಎಸ್ ಕಾರ್ಯಕರ್ತರು
ನರೇಗಾ ಕಾಮಗಾರಿ ತನಿಖೆಗೆ ಆಗ್ರಹಿಸಿ ಚಂಗಾವಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಹಾಗೂ ಜೆಡಿಎಸ್ ಕಾರ್ಯಕರ್ತರು   

ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಚಂಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತ್ವತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಬುಧವಾರ ಪ್ರತಿಭಟನೆ
ನಡೆಸಿದರು.

ಎಂ.ಟಿ.ಕೃಷ್ಣಪ್ಪ ಮಾತನಾಡಿ, ಗ್ರಾ.ಪಂ ಸದಸ್ಯೆ ಶಾಂತಮ್ಮ ಅವರ ಪತಿ ಕೃಷ್ಣಪ್ಪ ಅವರು ಅಕ್ರಮವಾಗಿ ಜಾಬ್‌ಕಾರ್ಡ್‌ದಾರರ ಖಾತೆಗೆ ಹಣ ವರ್ಗಾಯಿಸಿದ್ದಾರೆ. ನಿಯಮ
ಗಳನ್ನು ಗಾಳಿಗೆ ತೂರಿ ಉದ್ಯೋಗ ಖಾತ್ರಿ ಯೋಜನೆಯ ಹಣ ಲಪಾಟಿ
ಯಿಸುತ್ತಿರುವುದು ಖಂಡನೀಯ. ಈ ಬಗ್ಗೆ ಮೇಲಧಿಕಾರಿಗಳು ತನಿಖೆ ನಡೆಸಿ ಸಂಬಂಧಪಟ್ಟ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ಥಳಕ್ಕೆ ಜಿಪಂ ಸಿಇಒ ಬರಬೇಕು ಎಂದು ಪಟ್ಟು ಹಿಡಿದರು.

ಅನೇಕ ನರೇಗಾ ಕೆಲಸಗಳು ಬಿಲ್‌ನಲ್ಲಿ ಮಾತ್ರ ನಡೆದಿವೆ. ಈ ಬಗ್ಗೆ ಮೇಲಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು. ಎಲ್ಲ ಕೆಲಸಗಳಿಗೂ ಹಸ್ತಕ್ಷೇಪ ಮಾಡುವ ಸದಸ್ಯೆಯರ ಪತಿ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ಸದಸ್ಯತ್ವ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಪಂ ಇಒ ನರಸಿಂಹಯ್ಯ ಅವರಿಗೆ ಕೆರೆ ಮಾಡಿ, ಅವ್ಯವಹಾರದ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸದಸ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಖಾತೆ ಮಾಡಲು ಸಾಕಷ್ಟು ಲಂಚ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಕುಮಾರ್, ರಾಮು, ರಾಜಣ್ಣ, ಕೃಷ್ಣಪ್ಪ, ರಾಘ
ವೇಂದ್ರ, ರಾಜೇನಹಳ್ಳಿ ಮೂರ್ತಣ್ಣ, ಸಿ.ಎಂ.ನರಸಿಂಹಮೂರ್ತಿ, ಬಂಡೆ ಗಂಗಣ್ಣ, ಗೋವಿಂದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.