ADVERTISEMENT

ಪುನರ್ವಸತಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 1:16 IST
Last Updated 7 ಫೆಬ್ರುವರಿ 2021, 1:16 IST
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಅಂಗವಿಕಲರ ಪುನರ್ವಸತಿ ಯೋಜನೆ ಕಾರ್ಯಕರ್ತರು ಧರಣಿ ನಡೆಸಿದರು
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಅಂಗವಿಕಲರ ಪುನರ್ವಸತಿ ಯೋಜನೆ ಕಾರ್ಯಕರ್ತರು ಧರಣಿ ನಡೆಸಿದರು   

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗವಿಕಲರ ಹಾಗೂ ವಿವಿಧೋದ್ದೇಶ ‌ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ನೇತೃತ್ವದಲ್ಲಿ ಅಂಗವಿಕಲರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹದಿನೈದು ವರ್ಷಗಳಿಂದ ಅಂಗವಿ
ಕಲರ ಅಭಿವೃದ್ಧಿಗೆ ದುಡಿಯುತ್ತಿರುವ ವಿವಿಧೋದ್ದೇಶ ಪುನರ್ವಸತಿ ಯೋಜನೆ ಕಾರ್ಯಕರ್ತರು (ಎಂಆರ್‌ಡಬ್ಲ್ಯು), ‌ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‌ಡಬ್ಲ್ಯು) ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ (ಯುಆರ್‌ಡಬ್ಲ್ಯು) ಕೆಲಸ ಕಾಯಂ ಮಾಡಬೇಕು. ನಿವೃತ್ತರಿಗೆ ₹ 25 ಲಕ್ಷ ಇಡುಗಂಟು ನೀಡಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಚಿತ್ತಯ್ಯ, ‘ಸರ್ಕಾರ ‌ಇತ್ತೀಚೆಗೆ ನಮ್ಮ ಗೌರವಧನ ಹೆಚ್ಚಿಸಿದ್ದು ಕೃತಜ್ಞತೆ ಸಲ್ಲಿಸುತ್ತೇವೆ. ಇದರ ಜೊತೆಯಲ್ಲಿಯೇ ಹಲವು ಬೇಡಿಕೆಗಳ ಈಡೇರಿಕೆ ಬಾಕಿ ಇವೆ. ಅವುಗಳನ್ನು ಸಹ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯು ಹಾಗೂ ಯುಆರ್‌ಡಬ್ಲ್ಯುಗಳು ಕರ್ತವ್ಯದ ವೇಳೆ ಮೃತಪಟ್ಟರೆ ಸರ್ಕಾರ ₹ 50 ಸಾವಿರ ಪರಿಹಾರ ನೀಡುತ್ತಿದೆ. ಇದನ್ನು ₹ 30 ಲಕ್ಷಕ್ಕೆ ಹೆಚ್ಚಿಸಬೇಕು. ಎಸಿಡಿಪಿಒ ಅವರನ್ನು ಅಂಗವಿಕಲರ ಯೋಜನೆಗಳ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿರುವ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಅಂಗವಿಕಲರ ಎಲ್ಲ ಬ್ಯಾಕ್‍ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, 21 ತರಹದ ಅಂಗವಿಕಲರಿಗೆ ಆರೋಗ್ಯ
ತಪಾಸಣೆ ನಡೆಸಿ, ವೈದ್ಯಕೀಯ ಪ್ರಮಾಣ ಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು. ಜಿಲ್ಲಾ ಅಂಗವಿಕಲರ ಜಂಟಿ ಕ್ರಿಯಾಸಮಿತಿಯ ಸಿ.ಗಂಗರಾಜು, ಮಹಾಲಿಂಗಯ್ಯ, ಉಮೇಶ್, ಪ್ರಕಾಶ್, ಭಾಗ್ಯಮ್ಮ, ಅಶ್ವತ್ಥನಾರಾಯಣ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.