ADVERTISEMENT

ಅತ್ಯಾಚಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 16:40 IST
Last Updated 30 ಸೆಪ್ಟೆಂಬರ್ 2020, 16:40 IST
ತುಮಕೂರಿನಲ್ಲಿ ಬುಧವಾರ ಉತ್ತರ ಪ್ರದೇಶದ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ ನಡೆಸಿದರು
ತುಮಕೂರಿನಲ್ಲಿ ಬುಧವಾರ ಉತ್ತರ ಪ್ರದೇಶದ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ ನಡೆಸಿದರು   

ತುಮಕೂರು: ಉತ್ತರ ಪ್ರದೇಶದಲ್ಲಿ ಯುವತಿ ಮೇಲೆಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಹಾಗೂ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಎಐಡಿಎಸ್‍ಓ ಸಂಘಟನೆ ಜಿಲ್ಲಾ ಸಂಚಾಲಕಿ ಅಶ್ವಿನಿ, ‘ಈ ಪೈಶಾಚಿಕ ಕೃತ್ಯವೆಸಗಿದ ಮೇಲ್ಜಾತಿಯ ನಾಲ್ವರು ಯುವಕರು, ಘಟನೆ ನಡೆದ ನಂತರವೂ ಯಾವುದೇ ಅಳುಕಿಲ್ಲದೆ ಸ್ವತಂತ್ರವಾಗಿ ಓಡಾಡಿಕೊಂಡುಇದ್ದದ್ದು ನಾಗರಿಕ ಸಮಾಜಕ್ಕೆ ಆಘಾತವನ್ನುಂಟು ಮಾಡಿದೆ’ ಎಂದರು.

ಅತ್ಯಾಚಾರದ ನಂತರ ಬೆನ್ನುಹುರಿಯನ್ನು ಮುರಿದು, ನಾಲಿಗೆ ಕತ್ತರಿಸಿ ಆಕೆಯನ್ನು ಅರೆಜೀವವನ್ನಾಗಿ ಮಾಡಿದ್ದರು. ಗಾಯಗೊಂಡು ನರಳುತ್ತಿದ್ದ ಸಂತ್ರಸ್ತೆಗೆ ವೈದ್ಯಕೀಯ ನೆರವು ನೀಡದೆ ಪೊಲೀಸ್ ಠಾಣೆಯಲ್ಲಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ. ನಂತರ ಪೋಷಕರೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು. ಇಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ ಪೊಲೀಸರ ನಡವಳಿಕೆಯನ್ನು ಖಂಡಿಸಿದರು.

ADVERTISEMENT

ಉತ್ತರ ಪ್ರದೇಶದಲ್ಲಿ ಮಹಿಳಾ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಮಹಿಳೆಯರ ಮೇಲೆ ಅತ್ಯಾಚಾರಗಳು ಹೆಚ್ಚುತ್ತಲೇ ಇವೆ ಎಂದು ಆರೋಪಿಸಿದರು.

ಎಐಎಂಎಸ್‍ಎಸ್ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ರತ್ನಮ್ಮ, ‘ತುರ್ತಾಗಿ ಅಶ್ಲೀಲ ಜಾಲತಾಣಗಳು, ಅಶ್ಲೀಲಜಾಹೀರಾತುಗಳನ್ನು ನಿಷೇಧಿಸಬೇಕು. ಅತ್ಯಾಚಾರ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.