ಕಾವೇರಿ ನ್ಯಾಯಮಂಡಳಿ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ವಲಯಕ್ಕೆ ಒಟ್ಟು 25.31 ಟಿಎಂಸಿ ಅಡಿ ನೀರು ನಿಗದಿಯಾಗಿದೆ. ಅದರಂತೆ ನಾಲಾ ವಲಯದಲ್ಲಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ 14 ತಾಲ್ಲೂಕುಗಳಿಗೆ ನೀರು ಹಂಚಿಕೆಯಾಗಿದೆ. ಈ ಪೈಕಿ ಮಾಗಡಿ ತಾಲ್ಲೂಕಿನ 62 ಕೆರೆಗಳು ಮತ್ತು ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ 21 ಕೆರೆಗಳು ಸೇರಿದಂತೆ ಒಟ್ಟು 83 ಕೆರೆಗಳಿಗೆ ನೀರು ತುಂಬಿಸುವುದು ಯೋಜನೆ ಉದ್ದೇಶವಾಗಿದೆ. ಈ ಯೋಜನೆ ಸಾಕಾರಗೊಂಡರೆ ಮುಂದಿನ ದಿನಗಳಲ್ಲಿ ಕುಣಿಗಲ್‌ನಿಂದ ಮಾಗಡಿ, ರಾಮನಗರಕ್ಕೆ ನೀರು ಹರಿಸಲಾಗುತ್ತದೆ ಎಂಬ ವಿಷಯವು ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ರಾಜಕೀಯ ಕಿಚ್ಚು ಹಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.