ADVERTISEMENT

ಕುಡಿಯುವ ನೀರು ಪೂರೈಕೆಗೆ ಆಗ್ರಹ

ಮಧುಗಿರಿ: ಖಾಲಿ ಕೊಡಗಳೊಂದಿಗೆ ಮಹಿಳೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 2:15 IST
Last Updated 26 ಸೆಪ್ಟೆಂಬರ್ 2020, 2:15 IST
ಮಧುಗಿರಿ ತಾಲ್ಲೂಕು ಕಸಬಾ ವ್ಯಾಪ್ತಿಯ ಸೋಗೇನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ, ಮಹಿಳೆಯರು ಪ್ರತಿಭಟನೆ ನಡೆಸಿದರು
ಮಧುಗಿರಿ ತಾಲ್ಲೂಕು ಕಸಬಾ ವ್ಯಾಪ್ತಿಯ ಸೋಗೇನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ, ಮಹಿಳೆಯರು ಪ್ರತಿಭಟನೆ ನಡೆಸಿದರು   

ಮಧುಗಿರಿ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ಸೋಗೇನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ, ಗ್ರಾಮದ ಮಹಿಳೆಯರು ಖಾಲಿ ಕೊಡದೊಂದಿಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎರಡು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ನೀರಿಗಾಗಿ ದೂರದೂರಿಗೆ ಹೋಗಬೇಕು. ಬಿಜವರ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ನೀರಗಂಟಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದರು.

ಗ್ರಾಮದ ನಿವಾಸಿ ಲಕ್ಕಮ್ಮ ಮಾತನಾಡಿ, ‘ವಾರಕ್ಕೊಮ್ಮೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ದಿನವಿಡೀ ನೀರು ಸಂಗ್ರಹಿಸುವುದೇ ದೊಡ್ಡ ಕೆಲಸವಾಗಿದೆ. ನಿತ್ಯ ಕೂಲಿಗೆ ಹೋಗಲು ತೊಂದರೆಯಾಗುತ್ತದೆ. ಪಂಚಾಯಿತಿ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ. ಚರಂಡಿ ಸ್ವಚ್ಛಗೊಳಿಸಲು ಹಾಗೂ ಪೈಪ್‌ಲೈನ್ ಅಳವಡಿಸಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಣ ಕೇಳುತ್ತಾರೆ’ ಎಂದು ಆರೋಪಿಸಿದರು.

ADVERTISEMENT

ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಅಶ್ವತ್ಥಮ್ಮ, ಅಂಜಿನಮ್ಮ, ನಾಗ
ರತ್ನಮ್ಮ, ಲಕ್ಷ್ಮಮ್ಮ, ಗೌರಮ್ಮ, ರತ್ನಮ್ಮ, ಈಶ್ವರಯ್ಯ, ಮರಿಯಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.