ADVERTISEMENT

ಪರೀಕ್ಷೆ ಅಕ್ರಮ ತಡೆಗೆ ಹೊಸ ಕಾನೂನು ಅಗತ್ಯ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 4 ಮೇ 2022, 20:03 IST
Last Updated 4 ಮೇ 2022, 20:03 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ತುಮಕೂರು: ಪಿಎಸ್‌ಐ ನೇಮಕಾತಿ ಹಾಗೂ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಹೊಸದೊಂದು ಕಾನೂನು ರೂಪಿಸುವ ಅಗತ್ಯವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿ ಬುಧವಾರ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ,‘ಹಿಂದಿನಿಂದಲೂ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಲೇ ಬಂದಿವೆ. ಮುಂದಿನ ದಿನಗಳಲ್ಲಿ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕಾದರೆ ಕಾನೂನಿಗೆತಿದ್ದುಪಡಿ ತಂದು ನಿಯಂತ್ರಿಸಬೇಕಿದೆ’ ಎಂದರು.

‘ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಿಸುತ್ತಿಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.