ADVERTISEMENT

ಪಿಯುಸಿ ಮೌಲ್ಯಮಾಪನ; ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಿ

​ಪ್ರಜಾವಾಣಿ ವಾರ್ತೆ
Published 22 ಮೇ 2020, 15:14 IST
Last Updated 22 ಮೇ 2020, 15:14 IST

ತುಮಕೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಬೇಕು ಎಂದು ತುಮಕೂರು ಜಿಲ್ಲಾ ಇತಿಹಾಸ ಉಪನ್ಯಾಸಕರ ವೇದಿಕೆಯ ಸದಸ್ಯರು ಒತ್ತಾಯಿಸಿದ್ದಾರೆ.

ಅರ್ಥಶಾಸ್ತ್ರ ವಿಷಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ತುಮಕೂರಿನ ಎಂಪ್ರೆಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಾರಂಭಗೊಂಡಿದೆ. ಅದೇ ರೀತಿ ಇತಿಹಾಸ ಸೇರಿದಂತೆ ಇತರೆ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೂ ತುಮಕೂರು ಜಿಲ್ಲಾ ಕೇಂದ್ರದಲ್ಲೇ ಅವಕಾಶ ಕಲ್ಪಿಸಬೇಕು.

ಬೆಂಗಳೂರಿನ ಕೋರಮಂಗಲದ ಕಾಲೇಜೊಂದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳ ಇತಿಹಾಸ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅಲ್ಲಿಗೆ ಹೋಗಿ ಬರಲು ಈ ಸಮಯದಲ್ಲಿ ಕಷ್ಟವಾಗಲಿದೆ. ತುಮಕೂರಿನಲ್ಲಿ ಪ್ರತಿಷ್ಠಿತ ಪಿಯು ಕಾಲೇಜುಗಳು, ಪದವಿ ಕಾಲೇಜುಗಳು ಹಾಗು ವಿಶ್ವವಿದ್ಯಾಲಯ ಕೇಂದ್ರಗಳಿವೆ. ಹಾಗಾಗಿ ಇವುಗಳನ್ನು ಕೇಂದ್ರಗಳನ್ನಾಗಿ ಬಳಸಿಕೊಂಡು ಇತಿಹಾಸ ಮತ್ತು ಇತರ ವಿಷಯಗಳ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾ ಮಟ್ಟದಲ್ಲೇ ಪ್ರಾರಂಭಿಸಬೇಕು. ಈ ಮೂಲಕ ಮಾನಸಿಕ ನೆಮ್ಮದಿಯಿಂದ ಮೌಲ್ಯಮಾಪನ ಕಾರ್ಯಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.