ADVERTISEMENT

ತುಮಕೂರು: ಪುನೀತ್ ರಾಜ್‌ಕುಮಾರ್ ಅಭಿಮಾನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 13:27 IST
Last Updated 2 ನವೆಂಬರ್ 2021, 13:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ಕೋಡಿಪಾಳ್ಯ ಗ್ರಾಮದಲ್ಲಿ ನಟ ಪುನೀತ್ ರಾಜ್‌ಕುಮಾರ್ ಅಭಿಮಾನಿ ಭರತ್ (30) ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ನನ್ನ ಸಾವಿಗೆ ನಾನೇ ಕಾರಣ. ಪುನೀತ್ ಅಭಿಮಾನಿಯಾಗಿದ್ದು, ಅವರ ಸಾವನ್ನು ನೋಡಲಾಗುತ್ತಿಲ್ಲ. ಪುನೀತ್ ಹೋದ ಜಾಗಕ್ಕೆ ನಾನು ಹೋಗುತ್ತಿದ್ದೇನೆ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭರತ್ ಗಾರೆ ಕೆಲಸ ಮಾಡಿಕೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತನ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.