ADVERTISEMENT

ರಾಗಿ ಕಳವು: ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 13:28 IST
Last Updated 3 ಮಾರ್ಚ್ 2025, 13:28 IST

ಗುಬ್ಬಿ: ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ಇತ್ತೀಚೆಗೆ ರಾಜೇಶ್ ಎಂಬುವರ ಮನೆಯ ಮುಂದೆ ಚೀಲದಲ್ಲಿ ತುಂಬಿದ್ದ 3,713 ಕೆ.ಜಿ ರಾಗಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಕುಮಾರ್ ಹಾಗೂ ರಾಜ ಎಂಬುವರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಿಂದ 1.55 ಲಕ್ಷ ಬೆಲೆ ಬಾಳುವ ರಾಗಿ ಹಾಗೂ ಕೃತ್ಯಕ್ಕೆ ಬಳಸಿದ ಸರಕು ಸಾಗಾಣಿಕೆ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಸಿರಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಕೆ ಶೇಖರ್ ಮಾರ್ಗಸೂಚನೆ ಮೇರೆಗೆ ಗುಬ್ಬಿ ವೃತ್ತ ನಿರೀಕ್ಷಕ ರಾಘವೇಂದ್ರ ಟಿ.ಆರ್ ಹಾಗೂ ಗುಬ್ಬಿ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಸುನಿಲ್‌ ಕುಮಾರ್ ಜಿ.ಕೆ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.