ADVERTISEMENT

ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ: ಡಾ.ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 5:54 IST
Last Updated 21 ಜನವರಿ 2023, 5:54 IST
ಡಾ.ಜಿ.ಪರಮೇಶ್ವರ
ಡಾ.ಜಿ.ಪರಮೇಶ್ವರ   

ತುಮಕೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಡಾ.ಜಿ.ಪರಮೇಶ್ವರ ಹೇಳಿದರು.

ನಗರದ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಮೋದಿ ರಾಜ್ಯಕ್ಕೆ ಪದೇ ಪದೇ ಭೇಟಿ ಮಾಡುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಅವರು ಈ ರಾಷ್ಟ್ರದ ಪ್ರಧಾನಿ ಹಾಗೂ ಬಿಜೆಪಿ ಮುನ್ನಡೆಸುವ ನಾಯಕರು. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮುಂದೆ ನಮ್ಮ ನಾಯಕರೂ ರಾಜ್ಯಕ್ಕೆ ಬರುತ್ತಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಗೃಹ ಲಕ್ಷ್ಮಿ ಯೋಜನೆಯ ರೂಪುರೇಷೆಗಳನ್ನು ಇನ್ನೂ ಮಾಡಿಲ್ಲ. ವರ್ಷಕ್ಕೆ ₹24 ಸಾವಿರ ಕೋಟಿ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಯಾವ‌ ವರ್ಗದವರಿಗೆ ಕೊಡಬೇಕು ಎನ್ನುವುದನ್ನು ನಿರ್ಧಾರ ಮಾಡುತ್ತೇವೆ. ಅಂತಿಮವಾಗಿ ಚರ್ಚೆ ಮಾಡಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಈ‌ ಬಾರಿ ಎರಡು ಕ್ಷೇತ್ರದಲ್ಲಿ ನಿಲ್ಲುವುದಿಲ್ಲ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ ಎರಡು ಕ್ಷೇತ್ರದಲ್ಲಿ ಟಿಕೆಟ್ ಕೊಡುವ ಪ್ರಶ್ನೆ ಉದ್ಭವ ಆಗುವುದಿಲ್ಲ. ಆದಷ್ಟು ಶೀಘ್ರದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಒಂದು ಸಭೆ ಮುಗಿದಿದೆ, ಎರಡನೇ ಸಭೆಯ ನಂತರ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸುತ್ತೇವೆ. ಬಹುಶಃ ಫೆಬ್ರುವರಿ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಆಗಬಹುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.