ADVERTISEMENT

ಹುಳಿಯಾರು | ಮಳೆ ಕೊರತೆ: ಬಾಡಿದ ರಾಗಿ ಬೆಳೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 7:11 IST
Last Updated 9 ಸೆಪ್ಟೆಂಬರ್ 2025, 7:11 IST
ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ರಾಗಿ ಬೆಳೆ ಮಳೆ ಕೊರತೆಯಿಂದ ಬಾಡುತ್ತಿದೆ.
ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ರಾಗಿ ಬೆಳೆ ಮಳೆ ಕೊರತೆಯಿಂದ ಬಾಡುತ್ತಿದೆ.   

ಹುಳಿಯಾರು: ಹೋಬಳಿ ವ್ಯಾಪ್ತಿಯಲ್ಲಿ ತಡವಾಗಿ ಬಿತ್ತನೆಯಾದ ರಾಗಿ ಬೆಳೆ ಮಳೆ ಕೊರತೆಯಿಂದ ಬಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಹೋಬಳಿ ವ್ಯಾಪ್ತಿಯ ಕೆಲ ಭಾಗಗಳಲ್ಲಿ ಸೋನೆ ಮಳೆ ಆಗಿತ್ತು. ರೈತರು ಸೋನೆ ಮಳೆಗೆ ತಮ್ಮ ಜಮೀನು ಸ್ವಚ್ಛಗೊಳಿಸಿ ರಾಗಿ, ನವಣೆ, ಸಾಮೆ ಬಿತ್ತನೆ ಮಾಡಿದ್ದರು.

ಮೋಡ ಮುಸುಕಿದ ವಾತಾವರಣ ಹಾಗೂ ಆಗಾಗ ಸೋನೆ ಮಳೆ ಸುರಿದ ಕಾರಣ ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆದು ಬೆಳೆದಿದೆ. ಈಗ ಮಳೆ ಹಿಂದೆ ಸರಿದಿದ್ದು ರಾಗಿ ಪೈರು ಸೊರಗುತ್ತಿದೆ. ಹೋಬಳಿ ವ್ಯಾಪ್ತಿಯ ಕೆಂಕೆರೆ ಸುತ್ತಮುತ್ತ ಸ್ವಲ್ಪ ಸೋನೆ ಮಳೆ ಬಿಟ್ಟರೆ ಉಳಿದಂತೆ ಮಳೆ ಆಗಿಲ್ಲ ಎನ್ನುತ್ತಾರೆ ರೈತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT