ADVERTISEMENT

ತುಮಕೂರು: ರಾಜಕಾಲುವೆ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 23 ಮೇ 2024, 4:28 IST
Last Updated 23 ಮೇ 2024, 4:28 IST
ತುಮಕೂರಿನಲ್ಲಿ ಬುಧವಾರ ರಾಜ ಕಾಲುವೆ ಸ್ವಚ್ಛಗೊಳಿಸಲಾಯಿತು
ತುಮಕೂರಿನಲ್ಲಿ ಬುಧವಾರ ರಾಜ ಕಾಲುವೆ ಸ್ವಚ್ಛಗೊಳಿಸಲಾಯಿತು   

ತುಮಕೂರು: ನಗರದ ವಿವಿಧೆಡೆ ಬುಧವಾರ ರಾಜ ಕಾಲುವೆಗಳ ಒತ್ತುವರಿ ತೆರವು ಹಾಗೂ ಸ್ವಚ್ಛತಾ ಕಾರ್ಯ ನಡೆಯಿತು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ಜೆಸಿಬಿ, ಹಿಟಾಚಿ ವಾಹನಗಳ ಮುಖಾಂತರ ರಾಜ ಕಾಲುವೆಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯ ತೆರವುಗೊಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿನ ರಾಜ ಕಾಲುವೆಗಳ ಪರಿಸ್ಥಿತಿಯ ಬಗ್ಗೆ ಮೇ 18ರಂದು ‘ಕಾಲುವೆ ಒತ್ತುವರಿ ತೆರಿಗೆ ಇಚ್ಛಾಶಕ್ತಿ ಕೊರತೆ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಸಮಗ್ರ ವರದಿ ಪ್ರಕಟವಾಗಿತ್ತು. ನಂತರ ಎಚ್ಚೆತ್ತುಕೊಂಡ ಅಧಿಕಾರಿಗಳು ರಾಜ ಕಾಲುವೆ ಸ್ವಚ್ಛತೆ ಹಾಗೂ ಒತ್ತುವರಿ ತೆರವಿಗೆ ಮುಂದಾಗಿದ್ದಾರೆ.

ಟೂಡಾ ಬಡಾವಣೆ ಸೇರಿದಂತೆ ವಿವಿಧ ಭಾಗದ ರಾಜ ಕಾಲುವೆಯಲ್ಲಿ ತುಂಬಿಕೊಂಡಿದ್ದ ತ್ಯಾಜ್ಯ, ಗಿಡಗಳನ್ನು ತೆರವುಗೊಳಿಸಲಾಯಿತು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಯಿತು.

ADVERTISEMENT
ತುಮಕೂರಿನಲ್ಲಿ ಬುಧವಾರ ರಾಜ ಕಾಲುವೆ ಸ್ವಚ್ಛಗೊಳಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.