ADVERTISEMENT

ತುಮಕೂರು: ರಾಜಣ್ಣ ಅಮೃತ ಮಹೋತ್ಸವ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 9 ಮೇ 2025, 15:35 IST
Last Updated 9 ಮೇ 2025, 15:35 IST
ಆರ್.ರಾಜೇಂದ್ರ
ಆರ್.ರಾಜೇಂದ್ರ   

ತುಮಕೂರು: ದೇಶದಲ್ಲಿ ಯುದ್ಧದ ಕಾರ್ಮೋಡ ಕವಿದಿರುವುದರಿಂದ ನಗರದಲ್ಲಿ ಮೇ 13ರಂದು ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಮೃತ ಮಹೋತ್ಸವ, ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು ಮುಂದೂಡಲಾಗಿದೆ.

ಭಾರತದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಸಮಯದಲ್ಲಿ ಕಾರ್ಯಕ್ರಮ ನಡೆಸುವುದು ಸರಿಯಲ್ಲ. ದೇಶದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಸಮಾರಂಭ ಮುಂದೂಡಲಾಗಿದೆ ಎಂದು ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಸಮಯದಲ್ಲಿ ಅದ್ದೂರಿ ಕಾರ್ಯಕ್ರಮ ಮಾಡಿದರೆ ಜನರಿಗೆ ಬೇರೆಯದೆ ಸಂದೇಶ ನೀಡಿದಂತಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತರರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದರು.

ADVERTISEMENT

ಅಭಿನಂದನಾ ಸಮಿತಿ ಪ್ರಮುಖರಾದ ಮುರುಳೀಕೃಷ್ಣಪ್ಪ, ಎನ್.ಗೋವಿಂದರಾಜು, ಗಂಗಣ್ಣ, ಕೆ.ಎ.ದೇವರಾಜು, ಧನಿಯಕುಮಾರ್, ಎಸ್.ನಾಗಣ್ಣ, ಲಕ್ಷ್ಮಿನಾರಾಯಣ್, ಕೊಟ್ಟ ಶಂಕರ್, ಪಿ.ಮೂರ್ತಿ, ಡ್ಯಾಗೇರಹಳ್ಳಿ ವಿರೂಪಾಕ್ಷ, ನಾರಾಯಣಗೌಡ, ಟಿ.ಪಿ.ಮಂಜುನಾಥ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.