ADVERTISEMENT

ಮಾಜಿ ಶಾಸಕ ರಾಜಣ್ಣಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2019, 18:50 IST
Last Updated 12 ಫೆಬ್ರುವರಿ 2019, 18:50 IST
ರಾಜಣ್ಣ
ರಾಜಣ್ಣ   

ಬೆಂಗಳೂರು: ‍ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ಜರುಗಿಸಬಾರದು ಎಂದು ಪ್ರಶ್ನಿಸಿ, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಅವರಿಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿದೆ.

ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ನಡೆದ ಸಮಾರಂಭವೊಂದರಲ್ಲಿಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿ, ಮೈತ್ರಿ ಸರ್ಕಾರವನ್ನು ಟೀಕಿಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರ ಹಾಗೂ‍ಪಕ್ಷಕ್ಕೆ ನಿಮ್ಮ ಹೇಳಿಕೆಯಿಂದ ಮುಜುಗರ ಉಂಟಾಗಿದೆ ಎಂದೂ ನೋಟಿಸ್‌ನಲ್ಲಿ ಹೇಳಲಾಗಿದೆ.

ಯಾರೊಬ್ಬರೂ ಬಹಿರಂಗವಾಗಿ ಮಾಧ್ಯಮಗಳಲ್ಲಿ ಟೀಕೆ ಟಿಪ್ಪಣಿ ಮಾಡುವುದಾಗಲಿ, ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗುವಂತೆ ನಡೆದುಕೊಳ್ಳಬಾರದು. ಈ ಹಿಂದೆ ಅನೇಕ ಬಾರಿ ನಿಮಗೆ ಎಚ್ಚರಿಸಿದ್ದರೂ ನೀವು ತಪ್ಪನ್ನು ತಿದ್ದಿಕೊಂಡಿಲ್ಲ. ಮೂರು ದಿನಗಳಲ್ಲಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.