ADVERTISEMENT

ರಾಜಣ್ಣ ವಜಾ: ಮಧುಗಿರಿ ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ– ನಸೀಮಾ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 6:40 IST
Last Updated 12 ಆಗಸ್ಟ್ 2025, 6:40 IST
ಪುರಸಭೆ 3ನೇ ವಾರ್ಡ್‌ನ ಸದಸ್ಯೆ ನಸೀಮಾ ಬಾನು ಸಾದಿಕ್ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದರು
ಪುರಸಭೆ 3ನೇ ವಾರ್ಡ್‌ನ ಸದಸ್ಯೆ ನಸೀಮಾ ಬಾನು ಸಾದಿಕ್ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದರು   

ಮಧುಗಿರಿ: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಏಕಾಏಕಿ ಸಚಿವ ಸಂಪುಟದಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಪುರಸಭೆ 3ನೇ ವಾರ್ಡ್‌ನ ಸದಸ್ಯೆ ನಸೀಮಾ ಭಾನು ಸಾದಿಕ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದಾಗ, ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ ಅವರು ಕಚೇರಿ ಸಮಯದಲ್ಲಿ ರಾಜೀನಾಮೆ ಪತ್ರ ಸಲ್ಲಿಸುವಂತೆ ತಿಳಿಸಿದರು.

ಸದಸ್ಯೆ ನಸೀಮಾ ಭಾನು ಸಾದಿಕ್ ಮಾತನಾಡಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ರಾಜ್ಯ, ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಉತ್ತಮವಾದ ಅಭಿವೃದ್ಧಿ ಕೆಲಸ ಮಾಡುತ್ತಿದ್ದರು. ತಳ ಸಮುದಾಯ ಮತ್ತು ಬಡಜನರ ಏಳಿಗೆಗಾಗಿ ಶ್ರಮಿಸುತ್ತಿದ್ದರು. ಬಡವರ್ಗದ ಜನರ ಶಕ್ತಿಯಾಗಿ ಕೆಲಸ ಮಾಡುತ್ತಿದ್ದ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಿರುವುದು ಸರಿಯಾದ ಕ್ರಮವಲ್ಲ ಎಂದರು..

ಅಹಿಂದ ವರ್ಗಕ್ಕೆ ಮಾಡಿರುವ ಅನ್ಯಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಮನನೊಂದು ರಾಜೀನಾಮೆ ನೀಡುತ್ತಿದ್ದೇನೆ. ಉಪವಿಭಾಗಾಧಿಕಾರಿ ಕಚೇರಿ ಸಮಯದಲ್ಲಿ ರಾಜೀನಾಮೆ ಪತ್ರ ನೀಡಬೇಕೆಂದು ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಕಚೇರಿಗೆ ಬಂದು ರಾಜೀನಾಮೆ ಪತ್ರ ನೀಡುವುದಾಗಿ ತಿಳಿಸಿದರು.

ADVERTISEMENT

ಪುರಸಭೆ ಮಾಜಿ ಅಧ್ಯಕ್ಷ ಮಹಮದ್ ಅಯೂಬ್, ಮಾಜಿ ಸದಸ್ಯ ಸಾದಿಕ್, ಬಾಬಾ ಫಕ್ರುದ್ದೀನ್, ಮನ್ನು, ಶಬ್ಬೀರ್, ಸಿದ್ದಿಕ್, ಮುದಸೀರ್, ಅಲ್ಲಾವುದ್ದೀನ್, ಇಮ್ರಾನ್, ಅಲ್ಲುಬಾ, ರಂಗಶಾಮಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.