ADVERTISEMENT

ಸುರ್ಜೇವಾಲಾ ವಿರುದ್ಧ ರಾಜಣ್ಣ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 17:25 IST
Last Updated 11 ಜುಲೈ 2025, 17:25 IST
ಕೆ.ಎನ್‌.ರಾಜಣ್ಣ
ಕೆ.ಎನ್‌.ರಾಜಣ್ಣ   

ತುಮಕೂರು: ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ‘ನನಗೇನು ತಾಕೀತು ಮಾಡುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈಗ ಮತ್ತೊಮ್ಮೆ ಆಕ್ರೋಶ ಹೊರ ಹಾಕಿದ್ದಾರೆ.

‘ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಿರುವುದು ತರವಲ್ಲ. ಅವರು ಬಂದು ನಡೆಸಿದ ಪ್ರಕ್ರಿಯೆ ಬಗ್ಗೆ ನನಗೆ ಸಮಾಧಾನವಿಲ್ಲ’ ಎಂದು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರನ್ನು ಪಕ್ಷದ ಹೈಕಮಾಂಡ್, ಇಲ್ಲವೆ ಶಾಸಕರು ಬದಲಿಸಬೇಕು. ಶಾಸಕರು ಬದಲಾಯಿಸಲು ತಯಾರಿಲ್ಲ. ಹೈಕಮಾಂಡ್ ಬದಲಿಸುವುದಿಲ್ಲ ಅಂದುಕೊಂಡಿದ್ದೇನೆ’ ಎಂದರು.

ADVERTISEMENT

ದೆಹಲಿಗೆ ಹೋಗಲ್ಲ: ‘ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿ ನಾಯಕತ್ವವನ್ನು ಸಿದ್ದರಾಮಯ್ಯ ಒಪ್ಪುವುದು ಅನುಮಾನ. ಅವರಿಗೆ ಹಿಂದಿ ಬರುವುದಿಲ್ಲ. ರಾಷ್ಟ್ರಮಟ್ಟಕ್ಕೆ ಹೋಗಿ ಏನು ಮಾಡುತ್ತಾರೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.