ಹೃದಯಾಘಾತ (ಸಾಂದರ್ಭಿಕ ಚಿತ್ರ)
ತುಮಕೂರು: ನಗರದಲ್ಲಿ ಶನಿವಾರ ನಡೆದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ (42) ಎಂಬುವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು.
ಮಧುಗಿರಿ ತಾಲ್ಲೂಕಿನ ಬಡವನಹಳ್ಳಿಯ ಮಂಜುನಾಥ ಸ್ನೇಹಿತರ ಜತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನದ ನಂತರ ಆರೋಗ್ಯದಲ್ಲಿ ಏರುಪೇರಾಗಿ ಕುಸಿದು ಬಿದ್ದರು. ತಕ್ಷಣವೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆಯ ನಂತರ ಚೇತರಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.