ADVERTISEMENT

ತುಮಕೂರು: ಸಿದ್ಧಗಂಗಾ ಶ್ರೀ ಆಶೀರ್ವಾದ ಪಡೆದ ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 7:54 IST
Last Updated 14 ನವೆಂಬರ್ 2021, 7:54 IST
ಸಿದ್ಧಗಂಗಾ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿ ರಾಜೇಂದ್ರ
ಸಿದ್ಧಗಂಗಾ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿ ರಾಜೇಂದ್ರ   

ತುಮಕೂರು: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಆರ್. ರಾಜೇಂದ್ರ ಅವರು ನಗರದ ಸಿದ್ಧಗಂಗಾ ಮಠಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆದರು. ಬಳಿಕ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದಪಡೆದರು.

ವಿಧಾನ ಪರಿಷತ್ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಸಮಯ ಸನ್ನಿಹಿತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಜೇಂದ್ರ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳೊಂದಿಗೆ ಚರ್ಚಿಸಿದರು.

ಮುಖಂಡರಾದ ಕಲ್ಲಹಳ್ಳಿ ದೇವರಾಜು, ಪಿ. ಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟ್ ಮಠ್ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.