ADVERTISEMENT

ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 5:24 IST
Last Updated 17 ಅಕ್ಟೋಬರ್ 2020, 5:24 IST
ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎಂ.ರಾಜೇಶ್ ಗೌಡ ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ ಇದ್ದರು
ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎಂ.ರಾಜೇಶ್ ಗೌಡ ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ ಇದ್ದರು   

ಶಿರಾ: ವಿಧಾನಸಭೆಯ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎಂ.ರಾಜೇಶ್ ಗೌಡಶುಕ್ರವಾರ ನಾಮಪತ್ರ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ.ಸಿ.ಅಶ್ವಥ್ ನಾರಾಯಣ್ ಅವರ ಜತೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.

ನಗರದ ಗವಿಆಜಂನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಿನಿ ವಿಧಾನಸೌಧಕ್ಕೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ಎಸ್. ವಿಜಯೇಂದ್ರ, ಸಂಸದ ಎ.ನಾರಾಯಣಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ, ಶಾಸಕ ಜ್ಯೋತಿಗಣೇಶ್, ಕಿರಣ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.