ADVERTISEMENT

ಸಾಮೂಹಿಕ ಪ್ರಾರ್ಥನೆ; ಶಾಸಕರ ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಮೇ 2020, 14:36 IST
Last Updated 20 ಮೇ 2020, 14:36 IST
ಎಸ್.ಶಿವಣ್ಣ
ಎಸ್.ಶಿವಣ್ಣ   

ತುಮಕೂರು: ರಂಜಾನ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದಿರುವ ಕಾಂಗ್ರೆಸ್ ಶಾಸಕರಾದ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್, ಹ್ಯಾರೀಸ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಒತ್ತಾಯಿಸಿದರು.

‘ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ದೇಶ ವಿಭಜನೆಗೆ ಮುಂದಾಗಿದ್ದಾರೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಆಯಿತು. ಆಗಿನ ಸಂದರ್ಭ ಮತ್ತೆ ಈಗ ಆಗಲಿ ಎಂದು ಇವರು ಬಯಸುತ್ತಿದ್ದಾರೆ’ ಎಂದುಸುದ್ದಿಗೋಷ್ಠಿಯಲ್ಲಿ ಬುಧವಾರ ಆರೋಪಿಸಿದರು.

ದೇಶ ವಿಭಜನೆ ಸಂದರ್ಭದಲ್ಲಿ ಭಾರತದಲ್ಲಿ 3 ಕೋಟಿ ಮುಸ್ಲಿಮರು ಇದ್ದರು. ಇಷ್ಟು ವರ್ಷಗಳಿಂದ ಅವರನ್ನು ಸೌಹಾರ್ದಯುತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ದೇಶ ವಿಭಜನೆಯ ಸಂದರ್ಭದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶದಲ್ಲಿದ್ದ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ಮತಾಂತರ ಮಾಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಕೊರೊನಾ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲದು ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.