ತುಮಕೂರು: ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಕಿಬ್ಬನಹಳ್ಳಿ ಠಾಣೆ ಕಾನ್‌ಸ್ಟೆಬಲ್ ಎಚ್.ಎನ್.ಮಂಜುನಾಥ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಬಿ.ಕ್ರಾಸ್‍ನ ಇಂಪೀರಿಯಲ್ ಮಿಲ್ಟ್ರಿ ಹೋಟೆಲ್‍ನಲ್ಲಿ ಮಂಗಳವಾರ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು. ನೊಂದ ಮಹಿಳೆ ಸಿ.ಸಿ ಟಿ.ವಿ ದೃಶ್ಯಾವಳಿ ಸಹಿತ ದೂರು ನೀಡಿದ್ದು, ಬುಧವಾರ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.