ಅತ್ಯಾಚಾರ
ಸಾಂದರ್ಭಿಕ ಚಿತ್ರ
ಗುಬ್ಬಿ: ತಾಲ್ಲೂಕಿನ ಸಿಎಸ್ ಪುರ ಹೋಬಳಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದಾಳೆ.
ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬಾಲಕಿಯ ಸಂಬಂಧಿ, 21 ವರ್ಷದ ಯುವಕ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ.
ಭಯದಿಂದಾಗಿ ಬಾಲಕಿ ಇದುವರೆಗೂ ಪೋಷಕರಿಗೆ ಹಾಗೂ ಶಿಕ್ಷಕರಿಗೂ ವಿಷಯ ತಿಳಿಸಿರಲಿಲ್ಲ. ಇತ್ತೀಚೆಗೆ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಸಮಯದಲ್ಲಿ ವೈದ್ಯರು ಬಾಲಕಿ ಗರ್ಭಿಣಿಯಾಗಿರುವುದನ್ನು ಖಚಿತಪಡಿಸಿದ್ದಾರೆ.
ಸಿಎಸ್‌ಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.