ADVERTISEMENT

ಕೊರೊನಾ ಚಿಕಿತ್ಸೆಗೆ ಸಜ್ಜು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 11:29 IST
Last Updated 14 ಮಾರ್ಚ್ 2020, 11:29 IST
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದ ವಾರ್ಡ್‍ಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದ ವಾರ್ಡ್‍ಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.   

ತುಮಕೂರು: ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ತೆರೆದಿರುವ ಐಸೋಲೇಶನ್ ವಾರ್ಡ್‍ಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಈಗಾಗಲೇ ಐಸೋಲೇಶನ್ ವಾರ್ಡ್‍ನಲ್ಲಿ10 ಬೆಡ್‍ಗಳ ವ್ಯವಸ್ಥೆ ಮಾಡಿದ್ದು, ಹೆಚ್ಚುವರಿಯಾಗಿ 5 ಬೆಡ್‍ಗಳ ವ್ಯವಸ್ಥೆ ಕೂಡ ಮಾಡಲಾಗಿದೆ. ಕೊರೊನಾ ವೈರಸ್ ಲಕ್ಷಣ ಕಂಡುಬಂದವರಿಗೆ ಚಿಕಿತ್ಸೆ ನೀಡಲು ಸಕಲ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ತಮ್ಮ ನಡುವೆ ಇರುವ ಜನರು ವಿದೇಶಕ್ಕೆ ಹೋಗಿ ಬಂದು ಕೊರೊನಾ ಲಕ್ಷಣ ಕಂಡುಬಂದರೆ ಸಹಾಯವಾಣಿಗೆ ಕರೆಮಾಡಿ ಮಾಹಿತಿ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ADVERTISEMENT

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ, ಆರ್.ಎಂ.ಒ. ಡಾ.ವೀಣಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.