ADVERTISEMENT

ಪ್ರತಿಭಾ ಪುರಸ್ಕಾರ ವಿತರಣೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 15:27 IST
Last Updated 27 ಮಾರ್ಚ್ 2023, 15:27 IST
ತುಮಕೂರಿನಲ್ಲಿ ಸೋಮವಾರ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಪಾಲಿಕೆ ಆಯುಕ್ತ ಎಚ್.ವಿ. ದರ್ಶನ್‌ ಇತರರು ಉಪಸ್ಥಿತರಿದ್ದರು
ತುಮಕೂರಿನಲ್ಲಿ ಸೋಮವಾರ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಪಾಲಿಕೆ ಆಯುಕ್ತ ಎಚ್.ವಿ. ದರ್ಶನ್‌ ಇತರರು ಉಪಸ್ಥಿತರಿದ್ದರು   

ತುಮಕೂರು: ಲೋಡರ್ಸ್, ಚಾಲಕರನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಹೇಳಿದರು.

ನಗರದಲ್ಲಿ ಸೋಮವಾರ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಮ್ಯಾನುವಲ್ ಸ್ಕ್ಯಾವೆಂಜರ್ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೌರ ಕಾರ್ಮಿಕರು ಹಣದ ಆಸೆಯಿಂದ ಒಳ ಚರಂಡಿಗೆ ಇಳಿಯಬಾರದು. ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಪೌರ ಕಾರ್ಮಿಕ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉತ್ತಮ ಹುದ್ದೆಗಳಿಗೆ ಆಯ್ಕೆಯಾಗಬೇಕು. ಇದೇ ಉದ್ದೇಶದಿಂದಲೇ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಪೌರ ಕಾರ್ಮಿಕರು ನೆಮ್ಮದಿಯಿಂದ ಕುಳಿತು ತಿಂಡಿ ತಿನ್ನಲು ಸ್ಥಳ ಸಿಗುತ್ತಿಲ್ಲ. ಅವರಿಗಾಗಿ ವಿಶ್ರಾಂತಿ ಗೃಹ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ.ದಯಾನಂದ, ‘ಪೌರ ಕಾರ್ಮಿಕರು ಕೆಲಸದ ಜೊತೆ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಪೌಷ್ಟಿಕ ಆಹಾರ ಸೇವಿಸಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು’ ಎಂದರು.

ಜಿ.ಪಂ ಸಿಇಒ ಕೆ. ವಿದ್ಯಾಕುಮಾರಿ, ಪಾಲಿಕೆ ಆಯುಕ್ತ ಎಚ್.ವಿ. ದರ್ಶನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್. ಅಂಜನಪ್ಪ, ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್. ಮಂಜುನಾಥ್‌, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮೇಲ್ವಿಚರಣಾ ಸಮಿತಿಯ ಸದಸ್ಯ ಓಬಳೇಶ್, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿಯ ಸದಸ್ಯ ಕದುರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.