ADVERTISEMENT

ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 5:11 IST
Last Updated 1 ಅಕ್ಟೋಬರ್ 2021, 5:11 IST

ತುಮಕೂರು: ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಇಲಾಖೆಯ ಯೋಜನೆಯಡಿ, ಬೆಂಬಲ ಬೆಲೆ ಮತ್ತು ಇತರೆ ಸವಲತ್ತುಗಳನ್ನು ಪಡೆಯಲು ರೈತರು ‘FRUITS’ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ನೋಂದಣಿ ಸಂಖ್ಯೆ ಪಡೆಯುವುದು ಕಡ್ಡಾಯವಾಗಿದೆ.

ರೈತರು ತಮ್ಮ ಜಮೀನಿನ ವಿವರಗಳನ್ನು ಆಧಾರ್ ಮತ್ತು ಬ್ಯಾಂಕ್ ಖಾತೆ ವಿವರಗಳೊಂದಿಗೆ ಫ್ರೂಟ್ ತಂತ್ರಾಂಶದಲ್ಲಿ ದಾಖಲಿಸಿ ನೋಂದಣಿ ಸಂಖ್ಯೆ ಪಡೆಯಬೇಕು. ಈಗಾಗಲೇ ನೋಂದಣಿಯಾಗಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳನ್ನು ಕೂಡಲೇ ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಇಲಾಖೆಗಳಲ್ಲಿ ಸೇರ್ಪಡೆ ಮಾಡಬೇಕು.

ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.