ADVERTISEMENT

ರೇಣುಕಾ ತುಮಕೂರು ಮಹಾನಗರ ಪಾಲಿಕೆಯ ನೂತನ ಆಯುಕ್ತೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 16:53 IST
Last Updated 30 ಜೂನ್ 2020, 16:53 IST

ತುಮಕೂರು: ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದಲ್ಲಿ ಮುಖ್ಯ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಣುಕಾ ಅವರನ್ನು ತುಮಕೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಟಿ.ಭೂಬಾಲನ್‌ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT