ADVERTISEMENT

ತುಮಕೂರು: ಧ್ವಜಾರೋಹಣ ನೆರವೇರಿಸಿದ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 3:44 IST
Last Updated 26 ಜನವರಿ 2025, 3:44 IST
   

ತುಮಕೂರು: ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ನಂತರ ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು. ಮೀಸಲು ಪೊಲೀಸ್ ತಂಡ,‌ ನಾಗರಿಕ ಪೊಲೀಸ್ ತಂಡ, ಗೃಹರಕ್ಷಕ ದಳ, ಕಲ್ಪತರು ಪಡೆ, ಪೊಲೀಸ್ ವಾದ್ಯ ವೃಂದ, ಪೊಲೀಸ್ ಅಬಕಾರಿ ತಂಡ ಸೇರಿದಂತೆ ವಿವಿಧ ತಂಡಗಳು ಕವಾಯತಿನಲ್ಲಿ ಭಾಗವಹಿಸಿದ್ದವು.

ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಇತರರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.