
ಪ್ರಜಾವಾಣಿ ವಾರ್ತೆತುಮಕೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸಿದರು. ಪಥ ಸಂಚಲನದಲ್ಲಿ ಭಾಗವಹಿಸಿದ ಅಂಗವಿಕಲರ ತಂಡ ಗಮನ ಸೆಳೆಯಿತು.
ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಧ್ವಜಾರೋಹಣಕ್ಕೆ ಸಾಕ್ಷಿಯಾದರು. ಸಚಿವರು
ಧ್ವಜಾರೋಹಣದ ನಂತರ ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು.
ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ತಿನ ಸದಸ್ಯ ಆರ್.ರಾಜೇಂದ್ರ,
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.